ಪಕ್ಷದ ಬೆಳವಣಿಗೆಯಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪಾತ್ರ ಮಹತ್ವಪೂರ್ಣ: ಕೆ.ರಾಘವೇಂದ್ರ ಕಿಣಿ

ಪಕ್ಷದ ಸಂಘಟನಾತ್ಮಕ ಬೆಳವಣಿಗೆಯಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪಾತ್ರ ಮಹತ್ವಪೂರ್ಣವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಾಧ್ಯಮ ವಿಭಾಗದ ‘ಚಿಂತನ ಮಂಥನ’ ವರ್ಗದೊಂದಿಗೆ ಮುಂಬರಲಿರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಇನ್ನಷ್ಟು ಕ್ರಿಯಾಶೀಲತೆ ಮತ್ತು ಬದ್ಧತೆಯಿಂದ ಜವಾಬ್ದಾರಿ ನಿರ್ವಹಿಸೋಣ ಎಂದು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಮಾಧ್ಯಮ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ಮಾಧ್ಯಮ ತಂಡ ಮಂಡಲಾಧ್ಯಕ್ಷರ ನೇತೃತ್ವದಲ್ಲಿ ಪ್ರತೀ ಮಂಡಲಗಳ ಮಾಧ್ಯಮ ತಂಡದ ಸಭೆ ನಡೆಸಲಿದ್ದು, ವ್ಯವಸ್ಥಿತ ಮಾಧ್ಯಮ ನಿರ್ವಹಣೆಯ ಸಂವಹನದ ಜೊತೆಗೆ ಆಯಾ ಮಂಡಲ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡಿರುವ ಕೇಂದ್ರ ಮತ್ತು ರಾಜ್ಯ ಸರಕಾರಗಳ ಪ್ರಮುಖ ಅಭಿವೃದ್ಧಿ ಯೋಜನೆಗಳ ಮಾಹಿತಿಯನ್ನು ಕ್ರೋಡೀಕರಿಸಲಿದೆ.

ಜಿಲ್ಲಾ ಕೇಂದ್ರದಲ್ಲಿ ನಡೆಯಲಿರುವ ‘ಬಿಜೆಪಿ ಜಿಲ್ಲಾ ಮಾಧ್ಯಮ ಚಿಂತನ ಮಂಥನ ವರ್ಗ’ದಲ್ಲಿ ಜಿಲ್ಲಾ ವಕ್ತಾರರು, ಜಿಲ್ಲಾ ಸಹ ವಕ್ತಾರರು, ಜಿಲ್ಲಾ ಮಾಧ್ಯಮ ಸಂಚಾಲಕರು, ಸಹ ಸಂಚಾಲಕರು, ಸಮಿತಿ ಸದಸ್ಯರು ಹಾಗೂ ಮಂಡಲಗಳ ಮಾಧ್ಯಮ ಸಮಿತಿಯ ಸಂಚಾಲಕರು, ಸಹ ಸಂಚಾಲಕರು, ಸಮಿತಿ ಸದಸ್ಯರು ಮತ್ತು ಜಿಲ್ಲೆಯ ವಿವಿಧ ಮೋರ್ಚಾಗಳ ಮಾಧ್ಯಮ ಪ್ರಮುಖ್ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದ ಜನಪರ ಯೋಜನೆಗಳ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಿ, ವಿರೋಧ ಪಕ್ಷಗಳ ಅಸಹಾಯಕ ಮನಸ್ಥಿತಿಯ ಅಪಪ್ರಚಾರಕ್ಕೆ ತಕ್ಕ ಕಡಿವಾಣ ಹಾಕುವ ನಿಟ್ಟಿನಲ್ಲಿ ಪರಿಣಾಮಕಾರಿ ಮಾಧ್ಯಮ ನಿರ್ವಹಣೆಯ ಮೂಲಕ ಸದೃಢ ಪಕ್ಷ ಸಂಘಟನೆಗೆ ಪೂರಕ ಶಕ್ತಿಯಾಗಿ ತೊಡಗಿಸಿಕೊಳ್ಳೋಣ ಎಂದು ಕಿಣಿ ಹೇಳಿದರು.

ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಮತ್ತು ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮಾಧ್ಯಮ ನಿರ್ವಹಣೆ ಮತ್ತು ಸುದ್ಧಿ ಪ್ರಚಾರದ ಬಗ್ಗೆ ಸಂವಹನ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಹ ವಕ್ತಾರ ಗಿರೀಶ್ ಎಮ್. ಅಂಚನ್, ಜಿಲ್ಲಾ ಮಾಧ್ಯಮ ಸಮಿತಿ ಸದಸ್ಯರಾದ ವಿಜೇತ್ ಕುಮಾರ್ ಬೆಳ್ಳರ್ಪಾಡಿ, ವಿಜಯ ಶೆಟ್ಟಿ ಕೊಂಡಾಡಿ, ಶೈಲೇಶ್ ಹಿರೇಬೆಟ್ಟು, ಮಂಡಲಗಳ ಮಾಧ್ಯಮ ಸಂಚಾಲಕರಾದ ಆನಂದ್ ಸುವರ್ಣ ಮಠದಬೆಟ್ಟು, ಕಿಶೋರ್ ಕುಮಾರ್ ಕರಂಬಳ್ಳಿ, ಮಹೇಶ್ ಆಚಾರ್ಯ ಕೊಕ್ಕರ್ಣೆ, ಅಭಿಷೇಕ್ ಅಂಕದಕಟ್ಟೆ, ಸುರೇಂದ್ರ ಎಸ್. ಕಾಂಚನ್ ಕುಂದಾಪುರ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply