ಅಶ್ಲೀಲ ಚಿತ್ರಗಳ ಪ್ರಕರಣ : ರಾಜ್‌ ಕುಂದ್ರಾ ಜುಲೈ 23ರವರೆಗೂ ಪೊಲೀಸ್‌ ಕಸ್ಟಡಿಯಲ್ಲಿ

ಮುಂಬೈ: ಅಶ್ಲೀಲ ಚಲನಚಿತ್ರಗಳ ರಚನೆ ಮತ್ತು ಕೆಲ ಆ್ಯಪ್‌ಗಳ ಮೂಲಕ ಅವುಗಳ ಪ್ರಸರಣ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಸ್ಥಳೀಯ ನ್ಯಾಯಾಲಯ ಜುಲೈ 23ರವರೆಗೂ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ರಾಜ್ ಕುಂದ್ರಾ (45) ವಿರುದ್ಧ ವಿವಿಧ ಐಪಿಸಿ ಸೆಕ್ಷನ್ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಾದ ನಂತರ ಸೋಮವಾರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಉದ್ಯಮಿ ಕುಂದ್ರಾ ಅಶ್ಲೀಲ ಚಲನಚಿತ್ರಗಳನ್ನು ತಯಾರಿಸಿ ಮಾರಾಟ ಮಾಡುವ ಮೂಲಕ ಆರ್ಥಿಕವಾಗಿ ಲಾಭಗಳಿಸುತ್ತಿದ್ದಾರೆ.ಅವರ ಹೆಚ್ಚಿನ ವಿಚಾರಣೆಗಾಗಿ ಗರಿಷ್ಠ ಅವಧಿಗೆ ತಮ್ಮ ಕಸ್ಟಡಿಗೆ ನೀಡಬೇಕೆಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಪೊಲೀಸರು ತಿಳಿಸಿದರು.

ಕುಂದ್ರಾರ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದ್ದು, ಅದರ ವಿಷಯಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆ ಹಾಗೂ ಅವರ ವ್ಯವಹಾರ ಮತ್ತು ವಹಿವಾಟುಗಳನ್ನು ಸಹ ಪರಿಶೀಲಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಕುಂದ್ರಾ ಅವರಲ್ಲದೆ, ಮತ್ತೊಬ್ಬ ಆರೋಪಿ ರಿಯಾನ್ ಥೋರ್ಪ್ ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆತನನ್ನೂ ಜುಲೈ 23 ರವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ.

 
 
 
 
 
 
 
 
 
 
 

Leave a Reply