ವಿಧಾನ ಪರಿಷತ್ ಚುನಾವಣೆಗೆ ಡಾ| ರಾಜೇಂದ್ರ ಕುಮಾರ್ ಸ್ಪರ್ಧೆ..?

ಉಡುಪಿ:  ನಗರದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ  ಡಾ| ರಾಜೇಂದ್ರ ಕುಮಾರ್  ಸಹಕಾರಿ ಕ್ಷೇತ್ರಕ್ಕೆ ವಿಧಾನ ಪರಿಷತ್ ಸ್ಥಾನ ಮೀಸಲಿಡಬೇಕು. ನಿನ್ನೆಯಿಂದ ಎಲ್ಲರೂ ನನಗೆ ಚುನಾವಣೆಗೆ ಸ್ಪರ್ಧಿಸಲು ಒತ್ತಡ ಹಾಕುತ್ತಿದ್ದಾರೆ.

ಇನ್ನು ಎರಡು-ಮೂರು ದಿನಗಳಲ್ಲಿ ಚುನಾವಣೆಗೆ ನಿಲ್ಲುವ ಬಗ್ಗೆ ತೀರ್ಮಾನ ಮಾಡುತ್ತೇನೆ. ಯಾವುದೇ ರಾಜಕೀಯ ಪಕ್ಷದಿಂದ ಸ್ಪರ್ಧಿಸುವುದಿಲ್ಲ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ.

ಸೋಲು-ಗೆಲುವು ಮುಖ್ಯವಲ್ಲ ಯಾವುದೇ ಕಾರಣಕ್ಕೂ ಯಾವುದೇ ಪಕ್ಷದಿಂದ ಸ್ಪರ್ಧಿಸುವುದಿಲ್ಲ. ನನಗೆ ನವೋದಯ ಸದಸ್ಯರು, ಪಂಚಾಯತ್ ಸದಸ್ಯರು, ಸಹಕಾರಿಗಳಿಂದ ಒತ್ತಡ ಇದೆ ಎಂದರು.

ಶೇಕಡ 50 ರಷ್ಟು ಸಹಕಾರಿಗಳೇ ಪಂಚಾಯತ್ ಸದಸ್ಯರಾಗಿದ್ದಾರೆ. ಸ್ವಸಹಾಯ ಸಂಘಗಳ ಮಹಿಳೆಯರು ಶೇಕಡಾ 30ರಷ್ಟು ಸದಸ್ಯರಾಗಿದ್ದಾರೆ. ನವೆಂಬರ್ 17ರಂದು ನನ್ನ ತೀರ್ಮಾನ ಪ್ರಕಟಿಸುತ್ತೇನೆ. ಸಾಧ್ಯವಾದರೆ ಅದೇ ದಿನ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದರು.

 
 
 
 
 
 
 
 
 
 
 

Leave a Reply