ಡಾl ಡಿ. ವೀರೇಂದ್ರ ಹೆಗ್ಗಡೆ ಸಹಿತ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

ನವದೆಹಲಿ: ಧರ್ಮಸ್ಥಳ ಧರ್ಮಾಧಿಕಾರಿ ಡಾl ಡಿ. ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲೀಟ್‌ ಪಿ.ಟಿ. ಉಷಾ, ಆಂಧ್ರಪ್ರದೇಶದ ವಿ. ವಿಜಯೇಂದ್ರ ಪ್ರಸಾದ್‌ ಮತ್ತು ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಈ ಕುರಿತು ಟ್ವೀಟ್‌ ಮಾಡಿ ಶುಭ ಹಾರೈಸಿದ್ದಾರೆ.

ಡಿ. ವೀರೇಂದ್ರ ಹೆಗ್ಗಡೆ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ಮೂಲಕ ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿ ರಕ್ಷಣೆಯಲ್ಲಿ ಅವರು ಸಲ್ಲಿಸುತ್ತಿರುವ ಮಹತ್ತರ ಕಾರ್ಯ ಮಾಡಿರುವುದನ್ನು ನೋಡುವ ಅವಕಾಶ ನನಗೆ ಲಭ್ಯವಾಗಿದೆ. ಅವರು ಖಂಡಿತವಾಗಿಯೂ ಸಂಸತ್ತಿನ ಕಲಾಪಗಳನ್ನು ಪುಷ್ಟೀಕರಿಸುತ್ತಾರೆ’ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಪಿ.ಟಿ.ಉಷಾ, ವಿ. ವಿಜಯೇಂದ್ರ ಪ್ರಸಾದ್, ವೀರೇಂದ್ರ ಹೆಗ್ಗಡೆ ಮತ್ತು ಇಳಯರಾಜ ಅವರನ್ನು ಅಭಿನಂದಿಸಿ ಪ್ರಧಾನಿ ಮೋದಿ ವೈಯಕ್ತಿಕ ಟ್ವೀಟ್‌ ಮಾಡಿದ್ದಾರೆ.

ಪಿ.ಟಿ. ಉಷಾ ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿಯಾಗಿದ್ದಾರೆ. ಕ್ರೀಡೆಯಲ್ಲಿ ಅವರ ಸಾಧನೆ ಬಗ್ಗೆ ಎಲ್ಲರಿಗೂ ತಿಳಿದಿದೆ.

ಕಳೆದ ಕೆಲವು ವರ್ಷಗಳಿಂದ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುತ್ತಿರುವ ಅವರ ಕೆಲಸ ಶ್ಲಾಘನೀಯ‌. ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿದ್ದಕ್ಕಾಗಿ ಅಭಿನಂದನೆಗಳು’ ಎಂದು ಮೋದಿ, ಪಿಟಿ ಉಷಾ ಕುರಿತು ಟ್ವೀಟ್‌ ಮಾಡಿದ್ದಾರೆ.

ಖ್ಯಾತ ನಿರ್ದೇಶಕ ರಾಜಮೌಳಿ ಅವರ ತಂದೆ ಹಾಗೂ ಪ್ರಖ್ಯಾತ ಚಿತ್ರಕಥೆಗಾರ ವಿ. ವಿಜಯೇಂದ್ರ ಪ್ರಸಾದ್‌ ಅವರನ್ನು ನಾಮನಿರ್ದೇಶನ ಮಾಡಿರುವ ಸುದ್ದಿಯನ್ನು ಪ್ರಕಟಿಸಿ ಟ್ವೀಟ್ ಮಾಡಿರುವ ಮೋದಿ, “ವಿ. ವಿಜಯೇಂದ್ರ ಅವರು ದಶಕಗಳಿಂದ ಸೃಜನಾತ್ಮಕ ಲೋಕದೊಂದಿಗೆ ನಂಟು ಹೊಂದಿದ್ದಾರೆ. ಅವರ ಕೃತಿಗಳು ಭಾರತದ ವೈಭವಯುತ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ ಮತ್ತು ಜಾಗತಿಕವಾಗಿ ಛಾಪು ಮೂಡಿಸಿವೆ. ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಕ್ಕೆ ಅಭಿನಂದನೆಗಳು’ ಎಂದು ಬರೆದಿದ್ದಾರೆ. ಇಳಯರಾಜ ಅವರನ್ನೂ ಮೋದಿ ಅಭಿನಂದಿಸಿದ್ದಾರೆ.

 
 
 
 
 
 
 
 
 

Leave a Reply