Janardhan Kodavoor/ Team KaravaliXpress
23.6 C
Udupi
Friday, December 2, 2022
Sathyanatha Stores Brahmavara

‘ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ’ರವರಿಗೆ ಸನ್ಮಾನ

ಸುದೀರ್ಘ 62 ವರ್ಷಗಳಿಂದ ಪ್ರತಿಭಾನ್ವಿತ ತಬಲಾ ವಾದಕರಾಗಿ, ಕಳೆದ 42 ವರ್ಷಗಳಿಂದ ಉಚಿತ ತಬಲಾ ತರಬೇತಿ ನೀಡುತ್ತಾ ಸಂಗೀತ ಕಲಾ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದಿರುವ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರನ್ನು ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರ ವತಿಯಿಂದ ನ.1ರಂದು ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕೇಂದ್ರೀಯ‌ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಮಂಡಳಿ ಸದಸ್ಯ ಹಾಗೂ ಬಿಜೆಪಿ ಜಿಲ್ಲಾ ಸಹ ವಕ್ತಾರ‌ ಶಿವಕುಮಾರ್ ಅಂಬಲಪಾಡಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಹರೀಶ್ ಆಚಾರ್ಯ, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಭಾರತಿ ಭಾಸ್ಕರ್, ರಾಜೇಶ್ ಸುವರ್ಣ, ಲಕ್ಷಣ ಪೂಜಾರಿ ಹಾಗೂ ಗೋದಾವರಿ ಎಮ್. ಸುವರ್ಣ, ಚೆನ್ನಕೇಶವ, ಚಂದ್ರಿಕಾ ಅಶೋಕ್, ರಿದ್ಧಿ ಮತ್ತು ಪ್ರಿಶಾ ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!