ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಿಂದ ಜಿಲ್ಲಾಡಳಿತಕ್ಕೆ ದೇಣಿಗೆ

ಉಡುಪಿ : ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಸ್ಥೆ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಕೋವಿಡ್-19 ಸಾಂಕ್ರಾಮಿಕ ತಡೆಗೆ, ಉಡುಪಿ ಜಿಲ್ಲಾಡಳಿತವು ಕೈಗೊಳ್ಳುವ ಆರೋಗ್ಯ ಮೂಲ ಸೌಕರ್ಯಗಳನ್ನು ವೃದ್ಧಿಸುವ ಕಾರ್ಯಯೋಜನೆಗಳಿಗೆ ಸಹಕಾರಿಯಾಗುವಂತೆ, ಸಂಘದ ವತಿಯಿಂದ 1 ಲಕ್ಷ ರೂ. ದೇಣಿಗೆಯನ್ನು ನೀಡಲಾಯಿತು.

ಸಂಘದ ಅಧ್ಯಕ್ಷ ಕೆ. ಜೈರಾಜ್ ಬಿ. ರೈ, ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಗೆ
ಹಸ್ತಾಂತರಿಸಿದರು. ಸಂಘದ ನಿರ್ದೇಶಕ ರವೀಂದ್ರನಾಥ ಜಿ. ಹೆಗ್ಡೆ ಮತ್ತು ಪ್ರಭಾರ ಮಹಾಪ್ರಬಂಧಕ ಗಣೇಶ್ ಜಿ.ಕೆ. ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply