ಜಿಲ್ಲಾ ರಂಗಮoದಿರ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ

ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಉಡುಪಿ ಜಿಲ್ಲಾ ರಂಗ ಮಂದಿರ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನಾ ಕಾರ್ಯಕ್ರಮವು ಅಕ್ಟೋಬರ್ 2 ರಂದು ಬೆಳಗ್ಗೆ 10 ಗಂಟೆಗೆ ನಗರದ ಆದಿಉಡುಪಿಯಲ್ಲಿ ನಡೆಯಲಿದೆ. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ.ಆರ್.ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ,

ವಿಧಾನಪರಿಷತ್ ಶಾಸಕರುಗಳಾದ ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ| ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಿಸ್ಟ್ರಿಸ್ ಲಿಮಿಟೆಡ್ ಅಧ್ಯಕ್ಷ ಕೆ ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ಎನ್. ಮಂಜುಳಾ, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಪ್ರಕಾಶ್ ಜಿ.ಟಿ ನಿಟ್ಟಾಲಿ ಹಾಗೂ ಮತ್ತಿತರರು
ಭಾಗವಹಿಸಲಿದ್ದಾರೆ.

 
 
 
 
 
 
 
 
 
 
 

Leave a Reply