ರಾಷ್ಟ್ರೀಯ ಶಿಕ್ಷಣ ನೀತಿ –2020, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಒಂದು ಹೊಸ ಮನ್ವಂತರಕ್ಕೆ ನಾಂದಿ ~ಡಾ. ಗಣನಾಥ ಶೆಟ್ಟಿ ಎಕ್ಕಾರು

ರಾಷ್ಟ್ರೀಯ ಶಿಕ್ಷಣ ನೀತಿ – 2020, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಒಂದು ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ. ಜೊತೆಗೆ ಈ ನೀತಿಯು ಅನೇಕ ಹೊಸ ಸವಾಲುಗಳು ಹಾಗೂ ಸಾಧ್ಯತೆಗಳನ್ನು ತೆರೆದಿಟ್ಟದೆ. ಈ ಎಲ್ಲಾ ಸವಾಲು ಸಾಧ್ಯತೆಗಳನ್ನು ಉನ್ನತ ಶಿಕ್ಷಣ ಪರಿಷತ್ತು, ವಿಶ್ವವಿದ್ಯಾನಿಲಯಗಳು ಹಾಗೂ ಸ್ವಾಯತ್ತ ಶಿಕ್ಷಣ ಸಂಸ್ಥೆಗಳು ಒಟ್ಟಾಗಿ ಚರ್ಚಿಸಿ, ಕಾರ್ಯೋನ್ಮುರಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕಾಗಿದೆ ಎಂದು ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಭಿಪ್ರಾಯಪಟ್ಟರು. 
ಅವರು ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು & ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪದವಿ ಕಾಲೇಜುಗಳ ಪ್ರಾಂಶುಪಾಲರುಗಳು,  ರಾಷ್ಟ್ರೀಯ ಶಿಕ್ಷಣ ನೀತಿ – 2020ರ ಸಂಯೋಜಕರುಗಳು ಹಾಗೂ ಪ್ರಾಧ್ಯಾಪಕರುಗಳಿಗಾಗಿ ನಡೆಸಲಾದ ರಾಷ್ಟ್ರೀಯ   ಶಿಕ್ಷಣ ನೀತಿ – 2020 ಅನುಷ್ಠಾನ ಸವಾಲುಗಳು ಹಾಗೂ ಸಾಧ್ಯತೆಗಳು” ವಿಚಾರಸಂಕಿರಣ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಮಾತನಾಡಿದರು. 
ಮಂಗಳೂರು ವಿಶ್ವವಿದ್ಯಾನಿಲಯದ NEP – 2020 ನೋಡಲ್ ಅಧಿಕಾರಿಗಳಾದ ಪ್ರೊ. ರವೀಂದ್ರಾಚಾರಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಐಕ್ಯುಎಸಿ ನಿರ್ದೇಶಕರಾದ ಪ್ರೊ. ಮಂಜುನಾಥ ಪಟ್ಟಾಬಿ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆ ವಿವಿಧ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಸುಮಾರು ನೂರು ಪ್ರಾಂಶುಪಾಲರುಗಳು ಹಾಗೂ ಅಧ್ಯಾಪಕರುಗಳು ಪಾಲ್ಗೊಂಡಿದ್ದರು.
 
ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾಸ್ಕರ ಶೆಟ್ಟಿ ಎಸ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿಯರಾದ ನಾಗರತ್ನ ಹಾಗೂ ಶ್ರೀಲಕ್ಷ್ಮೀ ಪ್ರಾರ್ಥಿಸಿ, ಪ್ರಾಧ್ಯಾಪಕ ಡಾ. ಉಮೇಶ್ ಮಯ್ಯ ಸ್ವಾಗತಿಸಿ, ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಸೋಜನ್ ಕೆ.ಜಿ ವಂದಿಸಿದರು. ಪ್ರಾಧ್ಯಾಪಕ ಡಾ.ರಾಜೇಂದ್ರ ಕೆ ಕಾರ್ಯಕ್ರಮ ನಿರೂಪಿಸಿದರು.
 
 
 
 
 
 
 
 
 
 
 

Leave a Reply