Janardhan Kodavoor/ Team KaravaliXpress
33 C
Udupi
Tuesday, December 1, 2020

ಪತ್ರಿಕೋದ್ಯಮದ ರವಿ (ಬೆಳಗರೆ) ಅಸ್ತಂಗತ

ಬೆಂಗಳೂರು: ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ. ಕನ್ನಡ ಓದುಗರು, ವೀಕ್ಷಕರು ಈ ಸುದ್ದಿ ಅರಗಿಸಿ ಕೊಳ್ಳಲೇಬೇಕಾಗಿದೆ.

ಹೃದಯಾಘಾತದಿಂದ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನರಾಗಿದ್ದಾರೆ. ಗುರುವಾರ ತಡರಾತ್ರಿ ಹಾಯ್ ಬೆಂಗಳೂರ್ ಕಚೇರಿ ಯಲ್ಲೇ ಅವರಿಗೆ ಹೃದಯಾಘಾತ ವಾಗಿದೆ. ಕೂಡಲೆ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿ ಯಾಗಿಲ್ಲ.

ರಾತ್ರಿ 12 ಗಂಟೆ ಹಾಯ್ ಬೆಂಗಳೂರು ಆಫೀಸ್ ನಲ್ಲಿ ಹೃದಯಾಘಾತವಾಗಿದೆ. ನಂತರ ಅಪೋಲೋ ಆಸ್ಪತ್ರಗೆ ಕರೆದು ಕೊಂಡು ಹೋಗಲಾಗಿದೆ.

ಮಾರ್ಚ್ 15, 1958ರಲ್ಲಿ ಬಳ್ಳಾರಿಯಲ್ಲಿ ಜನನಿಸಿದ ಬೆಳಗೆರೆ ಪತ್ರಿಕಾರಂಗದ ಹಲವು ವಿಭಾಗದಲ್ಲಿ ಕೆಲಸ ಮಾಡಿದವರು ಅಪರಾಧ ಜಗತ್ತಿನ ಬಗ್ಗೆ ಅವರು ಬರೆದ ಪುಸ್ತಕಗಳು ಲೆಕ್ಕವೇ ಇಲ್ಲ.

ಬೆಂಗಳೂರಿನ ಪ್ರಾರ್ಥನಾ ಶಾಲೆಯಲ್ಲಿ ರವಿ ಬೆಳಗೆರೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶುಕ್ರವಾರ ಬೆಳ್ಳಗ್ಗೆ 9 ,ಗಂಟೆಯಿಂದ ರವಿ ಬೆಳಗೆರೆ ಅಂತಿಮ‌ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಸರ್ಪ ಸಂಬಂಧ, ಭೀಮಾತೀರದ ಹಂತಕರು, ನೀ ಹಿಂಗ ನೋಡಬೇಡ ನನ್ನ, ಡಿ ಕಂಪನಿ, ರಾಜ್ ಲೀಲಾ ವಿನೋದ ಸೇರಿದಂತೆ ಹಲವು ಕೃತಿಗಳು ಬೆಳಗೆರೆ ಕೊಡುಗೆ.

ಶಿಕ್ಷಣವನ್ನ ಬಳ್ಳಾರಿಯಲ್ಲಿ ಮುಗಿಸಿದ್ದ ರವಿಬೆಳಗೆರೆ ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಲಂಕೇಶ್ ಪತ್ರಿಕೆಯಲ್ಲಿ ಕೆಲಸ ಆರಂಭ ಮಾಡುತ್ತಾರೆ

1995 ರಲ್ಲಿ ಹಾಯ್ ಬೆಂಗಳೂರು ವಾರ ಪತ್ರಿಕೆ ಪ್ರಾರಂಭ ಮಾಡುತ್ತಾರೆ. ಕ್ರೈಂ ಡೈರಿ ಕಾರ್ಯಕಮದ ನಿರೂಪಕರಾಗಿದ್ದ ರವಿ ಬೆಳಗೆರೆ ದೊಡ್ಡ ಹೆಸರು ಸಂಪಾದಿಸಿದ್ದರು.

ಯುವ ಮನಸುಗಳಿಗಾಗಿ ಅವರು ಆರಂಭಿಸಿದ್ದ ಓ ಮನಸೆ ಪಾಕ್ಷಿಕ ಸಹ ಜನಮನ್ನಣೆಗೆ ಪಾತ್ರವಾಗಿತ್ತು.

ಕರ್ಮವೀರ, ಕಸ್ತೂರಿ, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಕೆಲಸ ಮಾಡಿದ್ದ ರವಿಬೆಳಗೆರೆ ಭಾವನ ಆಡಿಯೋ , ಭಾವನ ಪ್ರಕಾಶನ , ಪ್ರರ್ಥಾನ ಶಾಲೆಯ ಸಂಸ್ಥಾಪಕರು .

ಕಿರುತೆರೆಯಲ್ಲಿಯೂ ಬೆಳಗೆರೆ ಕಾಣಿಸಿ ಕೊಂಡಿದ್ದು ಅವರ ನಿರೂಪಣೆ ಮೆಚ್ಚುಗೆಗೆ ಪಾತ್ರವಾಗಿತ್ತು. ಬಿಗ್ ಬಾಸ್ ನ ಕೊನೆಯ ಸೀಸನ್ ನಲ್ಲಿಯೂ ಬೆಳಗೆರೆ ಭಾಗವಹಿಸಿ ದ್ದರು..

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಬೋಟ್ ದುರಂತ,6ಮಂದಿ ನಾಪತ್ತೆ

ಮಂಗಳೂರು: ಡಿ 1 : ಮೀನುಗಾರಿಕೆಗೆ ತೆರಳಿ ವಾಪಾಸಾಗುತ್ತಿದ್ದ ಬೋಟ್ ಮಗುಚಿ ಬಿದ್ದು 6 ಮಂದಿ ಮೀನುಗಾರರು ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬೋಳಾರದ ಶ್ರೀ ರಕ್ಷಾ ಎಂಬ ಮೀನುಗಾರಿಕಾ ಬೋಟ್...

}ಶ್ರೀಕೃಷ್ಣ ಮಠದ ನಾಮ ಫಲಕದಲ್ಲಿ ಕನ್ನಡವನ್ನು ತೆಗೆದು ಹಾಕಿರುವುದು ಸರಿಯಾದ ಕ್ರಮವಲ್ಲ~ಕಸಾಪ

ಉಡುಪಿ, ಡಿ.1: ಉಡುಪಿ ಶ್ರೀಕೃಷ್ಣ ಮಠದ ನಾಮ ಫಲಕದಲ್ಲಿ ಕನ್ನಡವನ್ನು ತೆಗೆದು ಹಾಕಿರುವುದು ಸರಿಯಾದ ಕ್ರಮವಲ್ಲ. ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ ಎಂದು ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ...

ಹಣತೆ ದೀಪದೊಂದಿಗೆ ಕಲಾತ್ಮಕ ಛಾಯಾಗ್ರಹಣ ನಡೆಸಿದ ಕರಂದಾಡಿ ಶ್ರೀಧರ್ ಶೆಟ್ಟಿಗಾರ್… 

​​ಕಾಪು ಮಜೂರು ಗ್ರಾಮದ ಕರಂದಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ ರವಿವಾರ ನಡೆಯಿತು. ದೀಪೋತ್ಸವದ ಪ್ರಯುಕ್ತ ಶ್ರೀ ದೇವರಿಗೆ ನವಕ ಕಲಶಾಭಿಷೇಕ, ಮಧ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ ರಂಗಪೂಜೆ,ತುಳಸಿ ಪೂಜೆ, ತುಳಸಿ ಸಂಕೀರ್ತಣೆ...

ಗ್ರಾ.ಪಂ. ಚುನಾವಣೆ ಘೋಷಣೆ: ಕಾಂಗ್ರೆಸ್ ರಾಜಕೀಯ ದೊಂಬರಾಟ ಪ್ರಾರಂಭ–ಪೆರ್ಣಂಕಿಲ ಶ್ರೀಶ ನಾಯಕ್ ಲೇವಡಿ

ಉಡುಪಿ: ಕೊರೋನಾದ ಸಂಕಷ್ಟದ ಕಾಲದಲ್ಲಿ ನಿದ್ದೆಯಲ್ಲಿ ಮುಳುಗಿದ್ದ ಕಾಂಗ್ರೆಸ್ ನಾಯಕರು ಇದೀಗ ಗ್ರಾಮ ಪಂಚಾಯತ್ ಚುನಾವಣೆಯ ಘೋಷಣೆಯಿಂದ ಎದ್ದು ರಾಜಕೀಯ ದೊಂಬರಾಟದಲ್ಲಿ ತೊಡಗಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ...

ಮಣಿಪಾಲ: ಯುವಕರ ಸಮಯ ಪ್ರಜ್ಞೆಯಿಂದ ಭಾರಿ​ ಬೆಂಕಿ​ ಅನಾಹುತದಿಂದ ಪಾರು

ಮಣಿಪಾಲ : ಸಮೀಪದ ದುಗ್ಲಿ ಪದವು ಎಂಬಲ್ಲಿ ತಡರಾತ್ರಿ ಸುಮಾರಿಗೆ ಬೆಂಕಿಬಿದ್ದಿದ್ದು​ ​ಯುವಕರ ಸಮಯ​ ​ಪ್ರಜ್ಞೆಯಿಂದ ಬಹಳಷ್ಟು ಜೀವ ಹಾನಿ ಮತ್ತು ಆಸ್ತಿಪಾಸ್ತಿ ರಕ್ಷಣೆಯಾಗಿದೆ.​ ಇಂದು ರಾತ್ರಿ ಸುಮಾರು ಹತ್ತು ಗಂಟೆ ಸುಮಾರಿಗೆ ಮಣಿಪಾಲ...
error: Content is protected !!