ಮಾನವ ಹಕ್ಕುಗಳ ಆಚರಣೆಯಿಂದ ಜನ ಸಾಮಾನ್ಯರಲ್ಲಿ ಅರಿವು-ಡಿಹೆಚ್‌ಓ​ ಡಾ.ಸುಧೀರ್ ಚಂದ್ರ ಸೂಡ

ಉಡುಪಿ: ಮಾನವ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಇಂದು​ ವಿಶ್ವದಾದ್ಯಂತ ಮಾನವ ಹಕ್ಕುಗಳನ್ನು ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಮಾನವ ಹಕ್ಕುಗಳ ಆಚರಣೆಯನ್ನು​ ಆಚರಿಸುವುದರ ಮೂಲಕ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದರು.

ಅವರು ಇಂದು ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ​ ಘಟಕದ ವತಿಯಿಂದ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.​ ಸಮಾಜದಲ್ಲಿ ಮಾನವನಿಗೆ ಸುಗಮ ಜೀವನ ನಡೆಸಲು ಮಾನವ ಹಕ್ಕುಗಳು ಅತ್ಯಗತ್ಯ. ಮಾನವ ಹಕ್ಕುಗಳನ್ನು​ ಗೌರವಿಸಿ, ಹಕ್ಕುಗಳ ಉಲ್ಲಂಘನೆಯಾಗ​ದಂತೆ ಎಚ್ಚರ ವಹಿಸಬೇಕು. 
ಪ್ರತಿಯೊಬ್ಬ ನಾಗರಿಕ ಘನತೆ, ಗೌರವದಿಂದ​ ಕೂಡಿದ ಬದುಕುವ ಹಕ್ಕು ಹೊಂದಿರಬೇಕೆAಬುವುದು ಮಾನವ ಹಕ್ಕುಗಳ ಆಶಯ. ಹೀಗಾಗಿ ಸಾಮಾಜಿಕ, ಆರ್ಥಿಕ,​ ಆರೋಗ್ಯ, ಸಮಾನತೆ ಸೇರಿದಂತೆ ಎಲ್ಲ ಬಗೆಯ ಮಾನವ ಹಕ್ಕುಗಳನ್ನು ಉಳಿಸಿ, ರಕ್ಷಿಸುವ ಕೆಲಸವಾಗಬೇಕು ಎಂದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ​ ಮಾತನಾಡಿ, ಸಂವಿಧಾನ ಬದ್ಧವಾಗಿ ನೀಡಿರುವ ಹಕ್ಕುಗಳನ್ನು ಮತ್ತು ಕರ್ತವ್ಯಗಳನ್ನು ಪ್ರತಿಯೊಬ್ಬರೂ ಕಟ್ಟು ನಿಟ್ಟಾಗಿ​ ಪಾಲಿಸಿದರೆ, ಮಾತ್ರ ಸಮಾಜದಲ್ಲಿ ಮಾನವ ಹಕ್ಕುಗಳ ಸಂರಕ್ಷಣೆ ಸಾಧ್ಯ. ವಿದ್ಯಾರ್ಥಿಗಳು ಮಾನವ ಹಕ್ಕುಗಳ ಬಗ್ಗೆ​ ಮಾಹಿತಿ ಪಡೆದು ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಯುವ ವಕೀಲ ಮುಂಡ್ಕೂರು ವಿನಯ್ ಆಚಾರ್ಯ ಮಾತನಾಡಿ,​ ಮಾನವ ಸಹಜವಾಗಿ ಹುಟ್ಟಿನಿಂದ ಪಡೆದಿರುವ ನೈಸರ್ಗಿಕವಾದ ಹಕ್ಕುಗಳೇ ಮಾನವ ಹಕ್ಕುಗಳು. ಮನುಷ್ಯರಿಗೆ​​ ತಂತ್ರವಾಗಿ ಜೀವಿಸುವ ಹಕ್ಕು ಸಮಾಜದಲ್ಲಿ ದೊರೆತ್ತಿದ್ದು, ಜನಸಾಮಾನ್ಯರ ಮೇಲೆ ಅಗುವ ಶೋಷಣೆಯನ್ನು​ ತಡೆದು, ಮಾನವೀಯ ಮೌಲ್ಯದಲ್ಲಿ ಸ್ವತಂತ್ರವಾಗಿ ಬದುಕುವ ಹಕ್ಕು ಸಮಾಜದಲ್ಲಿ ಮಾನವನಿಗಿದೆ ಎಂದರು.

ಕಾರ್ಯಕ್ರಮದಲ್ಲಿ ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮತ್ತು ರೆಡ್‌ಕ್ರಾಸ್‌ನ​ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.​ ರೆಡ್‌ಕ್ರಾಸ್ ಸಂಸ್ಥೆಯ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ ಸ್ವಾಗತಿಸಿದರು, ಗೌರವ ಕಾರ್ಯದರ್ಶಿ​ ಕೆ.ಜಯರಾಮ ಆಚಾರ್ಯ ಸಾಲಿಗ್ರಾಮ ನಿರೂಪಿ ಸಿದರು, ಗೌರವ ಖಜಾಂಜಿ ಡಾ. ಅರವಿಂದ ನಾಯಕ್ ಅಮ್ಮುಂಜೆ​ ವಂದಿಸಿದರು.​​
 
 
 
 
 
 
 
 
 
 
 

Leave a Reply