ಕಥೆ ಕೇಳೊಣ: ಸ್ವರ್ಣದಿಂದ ಅಮೃತದೆಡೆಗೆ

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿ  ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅರ್ಪಿಸುತ್ತಿರುವ.

ಕಥೆ ಕೇಳೋಣ ಸರಣಿ ಕಾರ್ಯಕ್ರಮದ 51ನೇ ಸಂಚಿಕೆ ಎಪ್ರಿಲ್ ತಿಂಗಳ ದಿನಾಂಕ 22ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಕತೆ, ಕವನ, ಕಾದಂಬರಿ ಬರೆಯುವ ಅಭಿರುಚಿಯುಳ್ಳ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ವೀಣಾ ಬಿ ಎನ್, (ಕ.ಆ.ಸೇ) ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ. ಎಪ್ರಿಲ್ 23ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರ ವಿರುವುದು.

ಇಂದು ಪ್ರಸಾರವಾಗುವ ಸಂಚಿಕೆಯಲ್ಲಿ ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಶುಭ ಸಂದೇಶ ನೀಡಿದ್ದಾರೆ. ಎಂದು ರೇಡಿಯೋ ಮಣಿಪಾಲ್ ನಲ್ಲಿ ಸಹಾಯಕ ಪ್ರಾಧ್ಯಾಪಕರು ಮತ್ತು ಸಂಯೋಜಕರಾಗಿರುವ ಡಾ.ರಶ್ಮಿ ಅಮ್ಮೆಂಬಳ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply