Janardhan Kodavoor/ Team KaravaliXpress
30.6 C
Udupi
Wednesday, August 17, 2022
Sathyanatha Stores Brahmavara

ಬ್ರಹ್ಮಾವರ ರೋಟರಿಯಿಂದ ನಮ್ಮ ಜನರ ಸುರಕ್ಷತೆ – ನಮ್ಮ ಗುರಿ ಶಾಸಕರೊಂದಿಗೆ ಸಂವಾದ

ಬ್ರಹ್ಮಾವರ ರೋಟರಿ ಹಾಲ್ ನಲ್ಲಿ ಬುಧವಾರದಂದು ರೋಟರಿ ಕ್ಲಬ್ ಬ್ರಹ್ಮಾವರ ಆಯೋಜಿಸಿರುವ ನಮ್ಮ ಜನರ ಸುರಕ್ಷೆ – ನಮ್ಮ ಗುರಿ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಶ್ರೀ ಕೆ ರಘುಪತಿ ಭಟ್ ಭಾಗವಹಿಸಿದರು.

ಸಂವಾದ ಕಾರ್ಯಕ್ರಮದಲ್ಲಿ ಬ್ರಹ್ಮಾವರ ಬಸ್ ನಿಲ್ದಾಣದ ಬಳಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಆಸುಪಾಸಿನ ಮುಖ್ಯರಸ್ತೆಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು ಈ ಬಗ್ಗೆ ಕ್ರಮವಹಿಸುವಂತೆ ಶಾಸಕರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸುವುದರ ಮೂಲಕ ಅಪಘಾತವನ್ನು ನಿಯಂತ್ರಿಸುವ ಭರವಸೆಯನ್ನು ನೀಡಿದರು.ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಬ್ರಹ್ಮಾವರದ ಅಧ್ಯಕ್ಷ ಆರೂರು ತಿಮ್ಮಪ್ಪ ಶೆಟ್ಟಿ, ಬ್ರಹ್ಮಾವರ ತಾಲೂಕು ಪಂಚಾಯತ್ ಅಧ್ಯಕ್ಷೆ ಜ್ಯೋತಿ ಉದಯಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯ ಮೈರ್ಮಾಡಿ ಸುಧಾಕರ್ ಶೆಟ್ಟಿ, ಕಾರ್ಯದರ್ಶಿಗ ಗುರುರಾಜ್ ಎನ್, ಲಯನ್ಸ್ ಕ್ಲಬ್ ಅಧ್ಯಕ್ಷ ಜಯರಾಮ್ ಶೆಟ್ಟಿ, ಸೀನಿಯರ್ ಸಿಟಿಜನ್ಸ್ ನ ಅಧ್ಯಕ್ಷಉದಯ್ ಕುಮಾರ್, ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ರಾಜಾರಾಮ್ ಶೆಟ್ಟಿ ಹಾಗೂ ಬ್ರಹ್ಮಾವರ  ವೃತ್ತ ನಿರೀಕ್ಷಕ ಅನಂತ ಪದ್ಮನಾಭ, ಕೋಟ ಪೊಲೀಸ್ ಉಪನಿರೀಕ್ಷಕಿ  ಪುಷ್ಪಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ ಗಂಗಾಧರ್, ಬ್ರಹ್ಮಾವರ ತಹಶೀಲ್ದಾರ ಕಿರಣ್ ಗೋರಯ್ಯ, ಬ್ರಹ್ಮಾವರ ಸಮುದಾಯ ಕೇಂದ್ರದ ವೈದ್ಯಾಧಿಕಾರಿಗ ಅಜಿತ್ ಕುಮಾರ್ ಶೆಟ್ಟಿ ಮತ್ತು ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!