ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು; ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು!

ಕಾಲು ಜಾರಿ ಬಿದ್ದಿದ್ದರಿಂದ ಬೆನ್ನು ಮೂಳೆಗೆ ಪೆಟ್ಟಾಗಿದ್ದು, ಸದ್ಯ ಸಾಲುಮರದ ತಿಮ್ಮಕ್ಕ ಅವರಿಗೆ ಜಯನಗರ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ ಅಪೋಲೊ ಆಸ್ಪತ್ರೆಯ ವೈದ್ಯರು.

ಭಾನುವಾರ ಸಂಜೆ ಬೆಂಗಳೂರಿನ ಜಯನಗರದ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ  ಅವರು ಕಾಲು ಜಾರಿ ಬಿದ್ದಿದ್ದರು. ಹೀಗಾಗಿ ಅವರನ್ನ ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕಾಲು ಜಾರಿ ಬಿದ್ದಿದ್ದರಿಂದ ಬೆನ್ನು ಮೂಳೆಗೆ ಪೆಟ್ಟಾಗಿದ್ದು, ಸದ್ಯ ತಿಮ್ಮಕ್ಕ ಅವರಿಗೆ ಜಯನಗರ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಸಾಲು ಮರದ ತಿಮ್ಮಕ್ಕರವರಿಗೆ MRI ಸ್ಕ್ಯಾನಿಂಗ್ ನಡೀತಿದೆ. ಕಾಲು ಜಾರಿ ಬಿದ್ದ ಹಿನ್ನೆಲೆಯಲ್ಲಿ ಬೆನ್ನು ಮೂಳೆಯಲ್ಲಿ ನೋವು ಕಾಣಿಸಿಕೊಂಡಿದೆ. ವಯೋಸಹಜವಾಗಿ ಕೆಲ ನೋವುಗಳು ಇರೋದ್ರಿಂದ ಈ ನೋವು ಹೆಚ್ಚು ಕಾಣಿಸಿಕೊಂಡಿದೆ. ಆದರೆ, ಆತಂಕ ಪಡುವ ಅಗತ್ಯವಿಲ್ಲ ಎಂದು ಅಪೋಲೊ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

 
 
 
 
 
 
 
 
 
 
 

Leave a Reply