ಇತಿಹಾಸ ಪ್ರಸಿದ್ಧ ಉಡುಪಿಯ ಸಗ್ರಿ ಚಕ್ರತೀರ್ಥ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಭಿವೃದ್ಧಿ ,ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ದೇವಸ್ಥಾನದ ಆಡಳಿತ ಮೊಕ್ತೇಸರರಾದ ರುದ್ರಯ್ಯ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಣಿಯೂರು ಮಠದ ಪರಮಪೂಜ್ಯ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರು ಫಲ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.
ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಅನಂತೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದವ್ಯಾಸ ಐತಾಳ್, ದೇವಸ್ಥಾನದ ತಂತ್ರಿಗಳಾದ ಕೆಜಿ ವಿಠ್ಠಲ ತಂತ್ರಿ ,ನಗರಸಭೆ ಮಾಜಿ ಸದಸ್ಯರಾದ ಪೆರಂಪಳ್ಳಿ ರಮೇಶ್ ನಾಯಕ್, ಇ೦ಜಿನಿಯರ್ ಪದ್ಮನಾಭ ಆಚಾರ್ಯ, ಉಡುಪಿಯ ಭವಾನಿ ನಾರಾಯಣ ಆಚಾರ್ಯ, ಯುವ ಉದ್ಯಮಿ ದಿನೇಶ್ ಅಮೀನ, ನಗರಸಭಾ ಸದಸ್ಯರಾದ ಗಿರಿಧರ ಆಚಾರ್ಯ ,ಗಾಯತ್ರಿ ಜ್ಯುವೆಲ್ಲರ್ಸ್ ಮಾಲಕರಾದ ಮುರಾರಿ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು