ಸಹಸ್ರಲಿಂಗದಲ್ಲಿ ಚಿಕನ್ ಬಿರಿಯಾನಿ ಭಕ್ಷಿಸಿದ ಮುಸ್ಲಿಂ ದಂಪತಿ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಶಾಲ್ಮಲಾ ನದಿ ದಂಡೆಯ ಸಹಸ್ರಲಿಂಗ ಕ್ಷೇತ್ರದಲ್ಲಿ ಮುಸ್ಲಿಂ ದಂಪತಿ ಚಿಕನ್ ಬಿರಿಯಾನಿ ಸೇವಿಸಿದ್ದಾರೆ. ಮುಸ್ಲಿಂ ದಂಪತಿ ಬಿರಿಯಾನಿ ತಿಂತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

 

ಇತ್ತೀಚೆಗೆ ನಡೆದಿರುವ ಈ ಘಟನೆಯ ವಿಡಿಯೋ ನೋಡಿ ಜಿಲ್ಲೆಯ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವವರ ವಿರುದ್ಧ ಕ್ರಮಕ್ಕೆ ಜನರು ಒತ್ತಾಯಿಸಿದ್ದಾರೆ. ಹಿಂದೂಗಳ ಧಾರ್ಮಿಕ ತಾಣವಾಗಿರುವ ಸಹಸ್ರಲಿಂಗದಲ್ಲಿ ಸಾವಿರಾರು ಲಿಂಗಗಳಿವೆ.

 

ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರು, ಕಾಲೇಜು ವಿದ್ಯಾರ್ಥಿಗಳಿಂದಲೇ ಕ್ಷೇತ್ರದ ಪಾವಿತ್ರ್ಯತೆ ಹಾಳಾಗುತ್ತಿರುವುದು ಮಾತ್ರ ವಿಪರ್ಯಾಸವೇ ಸರಿ.

 
 
 
 
 
 
 
 
 
 
 

Leave a Reply