ಮಹಾತ್ಮಾ ಗಾಂಧಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಧ್ವಜಾರೋಹಣ

ಮಹಾತ್ಮಾ ಗಾಂಧಿ ಪ್ರೌಢಶಾಲೆ ಸಾಹೇಬರಕಟ್ಟೆ ಇದರ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಬ್ರಹ್ಮಾವರ – ಬಾರ್ಕೂರು ಇದರ ಸಹಯೋಗದೊಂದಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಧ್ವಜಾರೋಹಣವನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಜಯರಾಮ ಹೆಗ್ಡೆ ನೆರವೇರಿಸಿದರು.
ಸ್ವಾತಂತ್ರ್ಯ ಎಂಬುವುದು ಪ್ರತಿಯೊಬ್ಬ ಜೀವನದಲ್ಲಿ ಬಹುಮುಖ್ಯವಾದ ಅಂಶ. ಇದನ್ನು ಕಿತ್ತುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ನಮ್ಮ ಸಮಾಜದ ರಕ್ಷಣೆಗೆ ಬದ್ಧರಾಗಿರೋಣ, ಬದಲಾಗುತ್ತಿರುವ ಭಾರತದಲ್ಲಿ ಈ ವರೆಗೆ ಕಂಡ ಸಾಮಾಜಿಕ ಪಿಡುಗುಗಳಿಂದ ದೂರಾಗೋಣ ಎಂಬ ಸಂದೇಶ ನೀಡಿದರು. ಕ್ಲಬ್ ನ ಮಾಜಿ ಅಧ್ಯಕ್ಷ ನಿವೃತ್ತ ಶಿಕ್ಷಕ ಶೇಖರ್ ಶೆಟ್ಟಿ ಶುಭಕೋರಿದರು ಕಾರ್ಯದರ್ಶಿ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು ಶಾಲಾಭಿವೃದ್ಧಿ ಸಮಿತಿ ಸ್ಥಾಪಕಾಧ್ಯಕ್ಷ ಯೆಡ್ತಾಡಿ ಸತೀಶ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಕೊಳ್ಕೇಬೈಲ್ ಇತರ ಪದಾಧಿಕಾರಿಗಳು, ಶಾಲಾ ಆಡಳಿತ ಮಂಡಳಿಯ ಶ್ರೀ ಸೂರ, ಶ್ರೀ ಶಿವ ವಸತಿ ನಿಲಯಗಳ ಮುಖ್ಯಸ್ಥರು ಶಾಲಾಭಿವೃದ್ಧಿ ಸಮಿತಿಯ ಶ್ರೀ ಪ್ರಸಾದ್ ಕಾಂಚನ್ ಹಾಗೂ ಇತರ ಪದಾಧಿಕಾರಿಗಳು, ಹಳೆ ವಿದ್ಯಾರ್ಥಿ ಸಂಘದ ವಿವಿಧ ಪದಾಧಿಕಾರಿಗಳು , ಶ್ರೀ ವಿನಾಯಕ ಮಂಡಲ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಿವಿಧ ಪದಾಧಿಕಾರಿಗಳು ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ರವೀಂದ್ರನಾಥ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಸತೀಶ್ ನಾಯ್ಕ್ ಸ್ವಾಗತಿಸಿ ಶಿಕ್ಷಕಿ ಡೈಸಿ ಡಿಸಿಲ್ವ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವಿಜಯಕುಮಾರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸಿಹಿ ತಿಂಡಿ ವಿತರಣೆ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

 
 
 
 
 
 
 
 
 
 
 

Leave a Reply