ಸಾಲಿಗ್ರಾಮ-ಪಾರಂಪಳ್ಳಿಯಲ್ಲಿ ಕೃಷಿ ಮಾಹಿತಿ ಶಿಬಿರ

ಕೋಟ: ಸಾಲಿಗ್ರಾಮ ವಲಯ ತೆಂಗು ಉತ್ಪಾದಕರ ಸೌಹಾರ್ದ ಸಂಘದ ಆಶ್ರಯದಲ್ಲಿ ಪಾರಂಪಳ್ಳಿಯ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ಕೃಷಿ ಮಾಹಿತಿ ಶಿಬಿರ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.

ಶಿಬಿರದಲ್ಲಿ ಭಾರತೀಯ ಕಿಸಾನ್ ಸಂಘದ ಉಡುಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಉಕಾಸ ಸಂಸ್ಥೆಯ ಶೇರು ಪತ್ರಗಳನ್ನು ಶೇರುದಾರರಿಗೆ ವಿತರಿಸಿ, ತೆಂಗಿನ ಬೆಳೆಯ ಮೌಲ್ಯವರ್ಧಕ ವಿಧಿವಿಧಾನಗಳನ್ನು ತಿಳಿಸಿದರು. ಬ್ರಹ್ಮವರ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಚೈತನ್ಯ ಮಳೆಗಾಲದ ಸಮಯದಲ್ಲಿ ತೆಂಗಿನ ನಿರ್ವಹಣೆಯ ಕುರಿತಂತೆ ಮಹತ್ವದ ಮಾಹಿತಿ ನೀಡಿದರು.
ಭಾರತೀಯ ಸ್ಟೇಟ್ ಬ್ಯಾಂಕಿನ ಕೃಷಿ ಅಧಿಕಾರಿ ಪಲ್ಲವಿ ಬ್ಯಾಂಕಿನಲ್ಲಿ ಲಭ್ಯವಿರುವ ಕೃಷಿ ಸಾಲ -ಸೌಲಭ್ಯಗಳ ಬಗ್ಗೆ ತಿಳಿಸಿದರು. ಸಭೆಯಲ್ಲಿ ಈ ಬಾರಿಯ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕöÈತ ಪಶುವೈದ್ಯಾಧಿಕಾರಿ ಡಾ ಅರುಣ ಕುಮಾರ್ ಶೆಟ್ಟಿ, ನಿವೃತ್ತ ಕೃಷಿ ಅಧಿಕಾರಿ ಚಂದ್ರಶೇಖರ ಶೆಟ್ಟಿ ಮತ್ತು ಚಂದ್ರಶೇಖರ ಉಪಾಧ್ಯ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಭಾರತೀಯ ಸ್ಟೇಟ್ ಬ್ಯಾಂಕಿನ ಮುಖ್ಯ ಪ್ರಬಂಧಕಿ ಪ್ರಜ್ಞ ಕಾಮತ್ , ಉಡುಪಿ ಜಿಲ್ಲಾ ಕೃಷಿ ಉತ್ಪನ್ನಗಳ ಮಾರುಕಟ್ಟೆ ಸಮಿತಿ ಉಪಾಧ್ಯಕ್ಷ ಕೃಷ್ಣ ಪೂಜಾರಿ, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಅನುಸೂಯ, ಭಾರತೀಯ ಸ್ಟೇಟ್ ಬ್ಯಾಂಕಿನ ಸಾಲಿಗ್ರಾಮ ಶಾಖೆಯ ಪ್ರಬಂಧಕಿ ಸಂಚಯತ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಲಕ್ಷ÷್ಮಣ ನಕ್ಷತ್ರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸತ್ಯನಾರಾಯಣ ಸೋಮಯಾಜಿ ಸ್ವಾಗತಿಸಿದರು. ನಿವೃತ್ತ ಬ್ಯಾಂಕ್ ಪ್ರಬಂಧಕ ಮಂಜುನಾಥ ಉಪಾಧ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಪ್ರಗತಿಪರ ಕೃಷಿಕ ಪಾರಂಪಳ್ಳಿ ರಘು ಮಧ್ಯಸ್ಥ ಕಾರ್ಯಕ್ರಮವನ್ನು ಸಂಘಟಿಸಿದ್ದರು.

 
 
 
 
 
 
 
 
 
 
 

Leave a Reply