ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನ ಉದ್ಘಾಟನೆ

ಉಡುಪಿ : ಅರಣ್ಯ ಇಲಾಖೆ, ಕುಂದಾಪುರ ಅರಣ್ಯ ವಿಭಾಗದ ವತಿಯಿಂದ ನಿರ್ಮಿಸಿರುವ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನದ ಉದ್ಘಾಟನಾ ಸಮಾರಂಭವು ಜುಲೈ 10 ರಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿಯಲ್ಲಿ ನಡೆಯಲಿದೆ.
ಮಾನ್ಯ ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ ಉದ್ಘಾಟಿಸಲಿದ್ದು, ಶಾಸಕ ಹಾಗೂ ವಿಧಾನಸಭೆಯ ಸರಕಾರಿ ಮುಖ್ಯ ಸಚೇತಕ ವಿ. ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ.
ಸಂಸದ ಬಿ.ವೈ.ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ. ರಘುಪತಿ ಭಟ್, ಲಾಲಾಜಿ.ಆರ್.ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೆ. ಪ್ರತಾಪ್ ಚಂದ್ರ ಶೆಟ್ಟಿ, ಆಯನೂರು ಮಂಜುನಾಥ, ಎಸ್.ಎಲ್. ಭೋಜೆಗೌಡ, ಡಾ||ತೇಜಸ್ವಿನಿ ಗೌಡ, ಮಂಗಳೂರು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ, ಹೆಬ್ರಿ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷ ಜಯಕರ ಪೂಜಾರಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಮೋಹನ್.
ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೀಮಾ ಗರ್ಗ್, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮಂಗಳೂರು ವೃತ್ತದ ನೋಡೆಲ್ ಅಧಿಕಾರಿ ಮಿಲ್ಲೋ ಟ್ಯಾಗೋ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಣಿವಣ್ಣನ್ ಪಿ, ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್ ನೆಟಾಲ್ಕರ್, ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಷ್ ರೆಡ್ಡಿ, ಕಾರ್ಕಳ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರೇನ್ ಪಿ., ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಪ್ರಶಾಂತ್ ಪಿ.ಕೆ ಭಾಗವಹಿಸಲಿದ್ದಾರೆ.
 
 
 
 
 
 
 
 
 
 
 

Leave a Reply