ರಾ.ಹೆ 66 ರ ಕಟಪಾಡಿಯಲ್ಲಿ 22.72 ಕೋಟಿ ರೂಗಳ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಿಸಲು ತಾತ್ವಿಕ ಅನುಮೋದನೆ~ ಶೋಭಾ ಕರಂದ್ಲಾಜೆ, ಸಂಸದೆ

ರಾಷ್ಟ್ರೀಯ ಹೆದ್ದಾರಿ 66ಗೆ (NH-66) ಕಟಪಾಡಿಯಲ್ಲಿ 22.72 ಕೋಟಿ ರೂಗಳ ವೆಚ್ಚದಲ್ಲಿ ಓವರ್ ಪಾಸ್ (Over Pass) ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಿದ ಕೇಂದ್ರ ಸರಕಾರ.ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ಕ್ಕೆ (NH-66), ಕಾಪು ವಿಧಾನ ಸಭಾ ಕ್ಷೇತ್ರದ ಕಟಪಾಡಿ ಪ್ರದೇಶದಲ್ಲಿ ಅಂಡರ್ ಪಾಸಿನ ಅವಶ್ಯಕತೆಯಿದೆ ಎಂದು ಕ್ಷೇತ್ರದ ಜನತೆ ಹಲವಾರು ವರುಷಗಳಿಂದ ಬೇಡಿಕೆಯಿಟ್ಟಿದ್ದರು.

ಹಲವಾರು ಬಾರಿ ಕೇಂದ್ರ ಭೂ ಸಾರಿಗೆ ಸಚಿವರನ್ನು ಭೇಟಿಯಾಗಿ ಕಟಪಾಡಿ ನಗರ ಪ್ರದೇಶ ವಾಗಿದ್ದು, ಹೆಚ್ಚಿನ ಜನ ಸಂಚಾರವಿರುವ ಕಾರಣದಿಂದ ರಾಷ್ಟ್ರೀಯ ಹೆದ್ದಾರಿಯನ್ನು ದಾಟಲು ‘ಅಂಡರ್ ಪಾಸಿನ/ಓವರ್ ಪಾಸ್’ ಅನಿವಾರ್ಯತೆಯಿದೆ ಎಂದು ಮನದಟ್ಟು ಮಾಡಲಾಗಿತ್ತು.

ಕ್ಷೇತ್ರದ ಜನರ ಅಪೇಕ್ಷೆಯಂತೆ, ಕೇಂದ್ರ ಸರಕಾರ ಕಟಪಾಡಿಯಲ್ಲಿ ಅಂಡರ್ ಪಾಸಿನ ಬದಲು, ‘ಓವರ್ ಪಾಸ್’ ನಿರ್ಮಿಸಲು ತಾತ್ವಿಕ ಅನುಮೋದನೆಯನ್ನು ನೀಡಿರುತ್ತದೆ. ಈ ಯೋಜನೆಯು ಕಾಪು ವಿಧಾನ ಸಭಾ ಕ್ಷೇತ್ರದ ಕಟಪಾಡಿ, ಬಂಟಕಲ್, ಶಿರ್ವ, ಮಟ್ಟು, ಬೆಳ್ಮಣ್ ಪ್ರದೇಶದ ನಿವಾಸಿಗಳಿಗೆ ಸಹಕಾರಿಯಾಗಲಿದೆ.

ವಿಸ್ತೃತ ಯೋಜನಾ ವರದಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಯಾರು ಮಾಡುತ್ತಿದೆ, ಮುಂದಿನ ತಿಂಗಳಲ್ಲಿ ಯೋಜನೆಯ ಪೂರ್ಣ ವಿವರಗಳು ಲಭ್ಯವಾಗಳಿವೆ.

ಜನಸಂಚಾರ ಸುಗಮಗೊಳಿಸುವ ನಿಟ್ಟಿನಲ್ಲಿ ಕಟಪಾಡಿಯಲ್ಲಿ ಒಟ್ಟು ರೂಪಾಯಿ. 22.72 ಕೋಟಿಗಳ ವೆಚ್ಚದಲ್ಲಿ ಓವರ್ ಪಾಸ್ ಅನ್ನು ನಿರ್ಮಿಸಲು ಅನುಮೋದನೆ ನೀಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ, ಕೇಂದ್ರ ಭೂ ಸಾರಿಗೆ ಸಚಿವರಾದ ಶ್ರೀ ನಿತಿನ್ ಗಡ್ಕರಿಯವರಿಗೆ ಅನಂತ ಧನ್ಯವಾದಗಳು.

 
 
 
 
 
 
 
 
 
 
 

Leave a Reply