ಗಿರೀಶ್ ಕಾಸರವಳ್ಳಿ ಅವರಿಗೆ ‘ವಿಶ್ವಪ್ರಭಾ’ ಪುರಸ್ಕಾರ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ 

ಕನ್ನಡ, ನಾಡು-ನುಡಿ, ಸಂಸ್ಕೃತಿಗೆ ಅನನ್ಯ ಸೇವೆ ಸಲ್ಲಿಸಿರುವ ಕಲಾವಿದರಿಗೆ ಉಡುಪಿ ವಿಶ್ವನಾಥ ಶೆಣಿೈ ಹಾಗೂ ಪ್ರಭಾವತಿ ವಿಶ್ವನಾಥ ಶೆಣೈ ಇವರ ಪ್ರಾಯೋಜಕತ್ವದಲ್ಲಿ ಪ್ರತಿವರ್ಷ ಪ್ರದಾನ ಮಾಡುತ್ತಿರುವ ‘ವಿಶ್ವಪ್ರಭಾ ಪುರಸ್ಕಾರ’ ಕ್ಕೆ ಈ ವರ್ಷ ಕನ್ನಡದ ಹೆಸರಾಂತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿಯವರು ಪಾತ್ರರಾಗಿದ್ದಾರೆ.

ಕನ್ನಡ ಸಿನಿಮಾ ಜಗತ್ತಿನಲ್ಲಿ ಈಗಾಗಲೇ 15 ಚಲನಚಿತ್ರಗಳನ್ನು ನಿರ್ದೇಶಿಸಿರುವ ಕಾಸರವಳ್ಳಿಯವರು ತಮ್ಮ ಅಷ್ಟೂ ಚಲನಚಿತ್ರಗಳಿಗೆ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿರುವುದು ಅವರ ಅಸಾಧಾರಣ ಪ್ರತಿಭೆಗೆ ಸಾಕ್ಷಿ. ಹದಿನಾರು ಬಾರಿ ರಾಷ್ಟ್ರಪತಿಯವರಿಂದ ‘ಕಮಲ ಪತ್ರ’ ಪ್ರಶಸ್ತಿಯನ್ನು ಪಡೆದಿರುವ ಇವರು, ನಾಲ್ಕು ಬಾರಿ ‘ಸ್ವರ್ಣಕಮಲ’ ಪ್ರಶಸ್ತಿಯನ್ನು ಪಡೆದಿರುತ್ತಾರೆ .

ಇದೇ ಬರುವ ಜನವರಿ 31, 2022 ರಂದು ಉಡುಪಿಯ ಎಂ.ಜಿ.ಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ವಿಶ್ವಪ್ರಭಾ ಪುರಸ್ಕಾರ -2022’ ವನ್ನು ಒಂದು ಲಕ್ಷದ ಗೌರವಧನ ಸಹಿತ ಪ್ರಶಸ್ತಿ ಫಲಕದೊಂದಿಗೆ ಶ್ರೀ ಗಿರೀಶ್ ಕಾಸರವಳ್ಳಿಯವರಿಗೆ ಪ್ರದಾನ ಮಾಡಲಾಗುವುದು ಎಂದು ವಿಶ್ವಪ್ರಭಾ ಪುರಸ್ಕಾರದ ಸಂಚಾಲಕರಾಗಿರುವ ಮರವಂತೆ ನಾಗರಾಜ್ ಹೆಬ್ಬಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರು ಗೌರವ ಅಧ್ಯಕ್ಷರಾದ ವಿಶ್ವನಾಥ ಶೆಣೈ, ಅಧ್ಯಕ್ಷರಾದ ಪ್ರೊಫೆಸರ್ ಶಂಕರ್, ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ ಹಾಗೂ ಸಂಚಾಲಕರಾದ ರವಿರಾಜ್ ಎಚ್.ಪಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply