ಸರಕಾರದ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನವಾದ ಅಗಸ್ಟ್ 15 ಹಾಗೂ ಹುತಾತ್ಮ ದಿನವಾದ ಜನವರಿ 26 ರಂದು ಅವರ ಸ್ಮರಣಾರ್ಥವಾಗಿ ರಾಜಧಾನಿಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಸರಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗೌರವ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.ಅಭಿಮಾಮನಿ ಬಳಗದ ಸ್ಥಾಪಕಧ್ಯಕ್ಷ ಸುರೇಶ್ ಗೋಕಾಕ್ ನೇತೃತ್ವದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಬಗ್ಗೆ ಮನವಿ ಸಲ್ಲಿಸಲಾಗಿತ್ತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉಡುಪಿಗೆ ಬಂದಾಗ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್ ಕುಮಾರ್ ಹಾಗು ಶಾಸಕ ರಘುಪತಿ ಭಟ್ ಇದ್ದ  ವೇದಿಕೆಯಲ್ಲಿ ಉಡುಪಿ ಜಿಲ್ಲಾಧ್ಯಕ್ಷ ಸಿದ್ಧಬಸಯ್ಯ ಸ್ವಾಮಿ ಚಿಕ್ಕ ಮಠ ನೇತೃತ್ವದಲ್ಲಿ ಮನವಿ ಸಲ್ಲಿಸಿತ್ತು. ಸಂಘಟನೆಯ ಸಮಷ್ಟಿ ಚಿಂತನೆಯ ಹೋರಾಟದ ಫಲವಾಗಿ ದೇಶಭಕ್ತನೋರ್ವನ ಹೋರಾಟಕ್ಕೆ ಜಯಂತಿ ಆಚರಣೆ ಮೂಲಕ ಸರಕಾರ ನ್ಯಾಯ ಒದಗಿಸಿದೆ. ಮುಖ್ಯಮಂತ್ರಿಯವರಿಗೆ ಹಾಗು ಸಂಬಂಧಪಟ್ಟ ರಾಜಕೀಯ ನಾಯಕರಿಗೂ ಹಾಗು ಅಧಿಕಾರಿ ವರ್ಗಕ್ಕೂ ಸುರೇಶ್ ಗೋಕಾಕ್ ಹಾಗು ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ ಅಭಿನಂದನೆ ಹಾಗು ಧನ್ಯವಾದ ಸಲ್ಲಿಸಿದ್ದಾರೆ.ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಡುಪಿ ಜಿಲ್ಲೆಯ ಗೌರವಾಧ್ಯಕ್ಷ ಜನಾರ್ದನ್ ಕೊಡವೂರು, ಕೃಷ್ಣ ಶೆಟ್ಟಿಬೆಟ್ಟು, ಮಹೇಶ್ ಗುಂಡಿಬೈಲು, ಈರಪ್ಪ ಗೌಂಡಿ, ಬಸವರಾಜ್ ಐಹೊಳೆ, ಕುಮಾರ್ ಪ್ರಸಾದ್, ಸವಿತಾ ನೋಟಗಾರ, ಲಕ್ಷ್ಮಣ್ ಕೋಲ್ಕಾರ್, ಅಯಾಜ್, ಶಿವವರಾಜ್ ಗುಂಜಿ, ಪಂಪೇಶ್, ರಮೇಶ್ ಎಂಜಿಎಂ, ಶರಣಪ್ಪ ಎಂಜಿಎಂ, ಬಾಬು ಎಂಜಿಎಂ, ಗೋಪಾಲ, ಶರಣಪ್ಪ,   ಹನುಮಂತರಾಯ ಪೂಜಾರಿ, ಕಾಶಿನಾಥ್ ಸುಬೇದಾರ್, ಬಸನಗೌಡ,ಮಂಜು ನಾಥ್ ಜಾಲಿಹಾಳ್, ಹನುಮಂತ,ಇವರೆಲ್ಲರ ನೇತೃತ್ವದಲ್ಲಿ ಸಂಘಟನೆಯನ್ನು ಇನ್ನಷ್ಟು ಗಟ್ಟಿಯಾಗಿ ಹಲವಾರು ಜನಪರ ಕಾಳಜಿಯ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಂಗೊಳ್ಳಿ ರಾಯಣ್ಣನ ಹೆಸರನ್ನು ಅಜರಾಮರವಾಗುವಂತೆ ಮುಂದಿನ ದಿನಗಳಲ್ಲಿ ಯೋಜನೆಯನ್ನು ರೂಪಿಸಲಾಗಿದೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ  ಬಗ್ಗೆ ಸ್ವಲ್ಪ ತಿಳಿಯೋಣ 

ಸಂಗೊಳ್ಳಿ ರಾಯಣ್ಣ ಹುಟ್ಟಿದ್ದು ಆಗಸ್ಟ್‌ 15ನೆಯ ದಿನ 1796,  ಆಗಸ್ಟ ಹದಿನೈದು ಭಾರತೀಯರಿಗೆ ಸ್ವಾತಂತ್ರ್ಯ ದೊರಕಿದ ದಿನವಾಗಿದೆ. ಭಾರತೀಯರಿಗೆ ರಾಷ್ಟ್ರೀಯ ಹಬ್ಬ.  ರಾಯಣ್ಣನಿಗೆ, ವೀರ ರಾಯ , ವೀರ ಸಂಗೊಳ್ಳಿ ರಾಯಣ್ಣ, ಶೂರ ರಾಯಣ್ಣ ಧೀರ ರಾಯಣ್ಣ, ಕ್ರಾಂತಿವೀರ ರಾಯಣ್ಣ ಇತ್ಯಾದಿ ದಾಖಲೆಗಳು ಜನಮನದಾಳದಿಂದ, ಜನಪದರಿಂದ ನಾಟಕಕಾರರಿಂದ, ಇತಿಹಾಸಕಾರರಿಂದ ರಾಯಣ್ಣನಿಗೆ ಹೆಸರಿಸಲ್ಪಟ್ಟಿವೆ. 

ಕಿತ್ತೂರಿನಿಂದ ಕೆಲವೇ ದೂರದಲ್ಲಿರುವ ಸಂಗೊಳ್ಳಿ ಗ್ರಾಮದಲ್ಲಿ ಭರಮಪ್ಪ ಮತ್ತು ಕೆಂಚವ್ವ ದಂಪತಿಯ ಪುತ್ರನಾಗಿ ರಾಯಣ್ಣ ಜನಿಸುತ್ತಾನೆ. ಇವರದು ಪ್ರಸಿದ್ಧ ಕುಟುಂಬ. ಇವರ ತಾತ ರೋಗಪ್ಪ ವೀರಪ್ಪ ದೇಸಾಯಿ ಯುದ್ಧದಲ್ಲಿ ತೋರಿದಂತಹ ಶೌರ್ಯಕ್ಕಾಗಿ ‘‘ಸಾವಿರ ಒಂಟೆ ಸರದಾರ’’ ಎಂಬ ಬಿರುದು ನೀಡಿ ರಕ್ತಮಾನ್ಯ ಭೂಮಿಯನ್ನು ಬಳುವಳಿಯಾಗಿ ನೀಡಿದನು

ರೋಗಪ್ಪ ಆಯುರ್ವೇದ ಪಂಡಿತರಾಗಿದ್ದರು. ರಾಯಣ್ಣನ ತಂದೆ ಭರಮಣ್ಣ ಮಹಾನ್ ಸಾಹಸಿ. ಕಿತ್ತೂರ ಸಂಸ್ಥಾನದ ಜನರಿಗೆ ಕಾಟ ಕೊಡುತ್ತಿದ್ದ ಹೆಬ್ಬುಲಿಯನ್ನು ಕೊಂದ ಕೀರ್ತಿ ಇವರದ್ದು. ಈ ಸಾಹಸಕ್ಕಾಗಿ ಕಿತ್ತೂರು ಮಲ್ಲಸರ್ಜ ದೇಸಾಯಿ ನೀಡಿದ ಹೊಲವೇ ರಕ್ತಮಾನ್ಯದ ಹೊಲ. ಸಂಗೊಳ್ಳಿಯಲ್ಲಿನ ಗರಡಿ ಮನೆ ಅತ್ಯಂತ ಪ್ರಸಿದ್ಧಿಯಿರುವ ಗರಡಿ.

ರಾಯಣ್ಣನಿಗೆ ಮರಣದಂಡನೆಯಾಗಿ ಗಲ್ಲುಗಂಬಕ್ಕೇರಿದ ದಿನ ಜನವರಿ ೨೬ನೆಯ ದಿನ ೧೮೩೧,  ಜನವರಿ ಇಪ್ಪತ್ತಾರು ಭಾರತೀಯರ ನಿಜವಾದ ಸ್ವಾತಂತ್ರ್ಯ ದಿನವಾಗಿದೆ ಹಾಗೂ ಗಣರಾಜ್ಯವ ದಿನವೂ ಹೌದು, ಪ್ರಜಾಸತ್ತಾತ್ಮಕ ದಿನ, ಭಾರತೀಯರಿಗೆ ರಾಷ್ಟ್ರೀಯ ಹಬ್ಬ.

ಇವೆರಡು ದಿನಗಳು ಜನನ ಮರಣದವುಗಳು ರಾಯಣ್ಣನಿಗೆ ಮಾತ್ರವಲ್ಲ, ಭಾರತೀಯರಿಗೆ ರಾಷ್ಟ್ರೀಯ ಉತ್ಸವದ ದಿನಗಳಾಗಿವೆ. ಇಡೀ ಜೀವಮಾನ ಆಂಗ್ಲರನ್ನು ನಾಡಿನಿಂದ-ದೇಶದಿಂದ ಹೊರಹಾಕಲು ಮಾಡಿದ ಹೋರಾಟ (ಲಡಾಯಿ)ಗಳು ಸ್ಮರಣೀಯವಾಗಿವೆ.

ಜನ್ಮದಾರಭ್ಯದಿಂದ ಮೂವತ್ತೈದು ವರುಷಗಳ ಕಾಲ ಅಂದರೆ ಸ್ವರ್ಗವಾಸಿಯಾಗುವವರೆಗೆ, ತನ್ನ ಸರ್ವಸ್ವವನ್ನು ಕಿತ್ತೂರ ನಾಡಿನ ಸ್ವಾತಂತ್ಯ್ರಕ್ಕಾಗಿ ಅರ್ಪಣೆ ಮಾಡಿದವನು ಸಂಗೊಳ್ಳಿ ರಾಯಣ್ಣ. ಬ್ರಿಟಿಷರು ಸಂಗೊಳ್ಳಿ ರಾಯಣ್ಣನ ವಿಚಾರಣೆ ನಡೆಸಿ ಮರಣದಂಡನೆ ನೀಡಿದರು.

ಆತನ ಜೊತೆ ಇತರ ಏಳು ಜನ ಅನುಯಾಯಿಗಳು ವಿಚಾರಣೆ ನಡೆಸಿ ಮರಣ ದಂಡನೆ ನೀಡಿದರು. ಆರು ಜನರಿಗೆ ಜೀವಾವಧಿ ಶಿಕ್ಷೆ ನೀಡಿ, ಸಮುದ್ರದಾಚೆಗೆ ಕಳಿಸಿದರು. ಅವರ ವಿವರ ಕೆಳಗಿನಂತಿದೆ.

ಜೀವಾವಧಿ ಶಿಕ್ಷೆಗೊಳಪಟ್ಟು ಸಮುದ್ರದಾಚೆಗೆ ಕಳಿಸಲ್ಪಟ್ಟವರು:  *ರುದ್ರನಾಯಕ 50ವರ್ಷ  *ಎಲ್ಲಾನಾಯಕ 40ವರ್ಷ *ಅಪ್ಪೂಜಿ  40ವರ್ಷ  *ರಾಣಮೋಜಿಕೊಂಡ  30ವರ್ಷ  *ಕೋನೇರಿ 40ವರ್ಷ  * ನೇಮಣ್ಣ  40ವರ್ಷ

ಮರಣದ ನಂತರ: ಸಂಗೊಳ್ಳಿ ಗ್ರಾಮದ ಬಿಚ್ಚುಗತ್ತಿ ಚನ್ನಬಸವಣ್ಣ ಮಾರುವೇಷದಲ್ಲಿ ರಾಯಣ್ಣನ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡು ಇವನ ಸಮಾಧಿಯ ಮೇಲೆ ಆಲದ ಸಸಿ ನೆಡುವ ಮೂಲಕ ತನ್ನ ಗೆಳೆಯರಿಗೆ ಅಂತಿಮ ನಮನ ಸಲ್ಲಿಸಿದ್ದನು.

ಅಂದು ನೆಟ್ಟ ಆಲದ ಸಸಿ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ.  ನಮ್ಮ ರಾಷ್ಟ್ರೀಯ ವೃಕ್ಷವಾಗಿ ದೇಶಾಭಿಮಾನಿಗಳಿಗೆ ಸದಾಕಾಲ ಸ್ಪೂರ್ತಿಯ ಸಂಕೇತವಾಗಿ ಬೃಹದಾಕಾರವಾಗಿ ಬೆಳೆದು ಇಂದು ಪೂಜ್ಯ ಭಾವನೆಗಳಿಗೆ ಇಂಬು ನೀಡುವ ಪುಣ್ಯ ಸ್ಥಳವಾಗಿದೆ.

  • ರಾಯಣ್ಣನ ನಿಸ್ವಾರ್ಥ ಹೋರಾಟ, ದೇಶಪ್ರೇಮ ಯುವಜನತೆಯಲ್ಲಿ ಸ್ಫೂರ್ತಿಯನ್ನು ತುಂಬುತ್ತದೆ. ಇದ್ದರೆ ರಾಯಣ್ಣನಂತಹ ದೇಶಪ್ರೇಮಿಗಳಿರಬೇಕು ಎನ್ನುವುದು ಎಲ್ಲರ ಮಾತಾಗಿದೆ. ರಾಯಣ್ಣನ ದಂಡಿನಲ್ಲಿ ಸ್ಮರಿಸಬೇಕಾದ ಅತ್ಯಂತ ಮಹತ್ವದ ವಿಷಯವೆಂದರೆ ಒಗ್ಗಟ್ಟು ಉಂಟು ಮಾಡಿರುವ ಬಗೆಯನ್ನು ತಿಳಿಯುವುದು.
  • ರಾಯಣ್ಣನ ಹೆಸರನ್ನು ಅಮರವಾಗಿಸಲು ಬೆಂಗಳೂರಿನ ರೈಲು ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದು ಹೆಸರಿಡಲಾಗಿದೆ.

    ಚಲನಚಿತ್ರ: ರಾಯಣ್ಣನ ಬದುಕನ್ನು ಆಧರಿಸಿ 1967ರಲ್ಲಿ ಒಂದು ಚಿತ್ರ ನಿರ್ಮಾಣವಾಯ್ತು. ಮತ್ತೆ 2012ರಲ್ಲಿ ಸಂಗೊಳ್ಳಿ ರಾಯಣ್ಣ ಎಂಬ ಹೆಸರಿನಲ್ಲಿಯೇ ಮತ್ತೊಂದು ಅದ್ದೂರಿ ಚಿತ್ರವೂ ನಿರ್ಮಾಣ ವಾಯ್ತು. ಇದನ್ನು ನಿರ್ಮಿಸಿದವರು ಆನಂದ ಅಪ್ಪುಗೋಳ ಮತ್ತು ಇದನ್ನು ನಿರ್ದೇಶಿಸಿದವರು ನಾಗಣ್ಣ. ಈ ಚಿತ್ರದ ನಾಯಕರಾಗಿ ದರ್ಶನ್ ತೂಗುದೀಪ್  ಅಭಿನಯಿಸಿದ್ದಾರೆ. ತಾಯಿಯ ಪಾತ್ರದಲ್ಲಿ [ ಉಮಾಶ್ರೀಯವರು] ಮತ್ತು ಕಿತ್ತೂರು ಚೆನ್ನಮ್ಮನಾಗಿ ಜಯಪ್ರದಾ ಕೂಡಾ ಅಭಿನಯಿಸಿದ್ದಾರೆ.

 
 
 
 
 
 
 
 
 
 
 

Leave a Reply