ಆನ್ ಲೈನ್ ಮೂಲಕ ಮದ್ಯ ಮಾರಾಟಕ್ಕೆ ಸಿದ್ಧತೆ; ಸನ್ನದುದಾರ ವಿರೋಧ

ಉಡುಪಿ: ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದಾಯಕ್ಕೆ ಹೊಡೆತ ಬಿದ್ದಿದೆ. ವ್ಯಾಪಾರ ವಹಿವಾಟಿಗೆ ಹೊಡೆತ ಬಿದ್ದಿದೆ. ಸರ್ಕಾರ, ಸಂಪನ್ಮೂಲ ಸಂಗ್ರಹಕ್ಕೆ ಪರ್ಯಾಯ ಮಾರ್ಗ ಅನುಸರಿಸುತ್ತಿದ್ದು, ಇದೀಗ ಆನ್ ಲೈನ್ ನಲ್ಲಿ ಮದ್ಯ ಮಾರಾಟಕ್ಕೆ ನಿರ್ಧರಿಸಲಾಗಿದೆ ಎಂದು ಅ ಧಿಕೃತ ಮೂಲಗಳು ತಿಳಿಸಿವೆ. ಸರ್ಕಾರದ ಈ ನಿರ್ಧಾರವನ್ನು ರಾಜ್ಯದ ಸನ್ನದುದಾರರಿಂದ ವಿರೋಧ ವ್ಯಕ್ತವಾಗಿದೆ.

ಲಾಕ್ ಡೌನ್ ನಿಂದ ಉಂಟಾಗಿದ್ದ ಆರ್ಥಿಕ ಸಂಕಷ್ಟದಿಂದ ಹೊರಬರಲು ಸರ್ಕಾರವು ಹಳ್ಳಿಗಳಲ್ಲಿ ಹೊಸದಾಗಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯಲು ತೀರ್ಮಾನಿಸಿ ಆನ್ ಲೈನ್ ವ್ಯಾಪಾರಕ್ಕೆ ನಿರ್ಧರಿಸಲಾಗಿದೆ. ರಾಜ್ಯ ಸರಕಾರ ಈ ಕುರಿತು ಖಾಸಗಿ ಕಂಪನಿಯೊಂದಿಗೆ ಒಡಂಬ ಡಿಕೆಗೆ ಚಿಂತನೆ ನಡೆಸಿದೆ.

ಕಳೆದ ಮೇ 27 ರಂದು ಸಭೆ ನಡೆಸಿ ರಾಜ್ಯಾದ್ಯಂತ ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡಲು ಅವಕಾಶ ಕಲ್ಪಿಸಲು ಅಬಕಾರಿ ಇಲಾಖೆ ಮಟ್ಟದಲ್ಲಿ ಚರ್ಚೆ ನಡೆಸಲಾಗಿದೆ. ಸರ್ಕಾರದ ಹಂತದಲ್ಲಿ ಚರ್ಚಿಸಿ, ಶೀಘ್ರ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಆನ್ ಲೈನ್ ಮದ್ಯ ವ್ಯಾಪಾರ ಸಾಧುವಲ್ಲ. ಅಪ್ರಾಪ್ತರೂ ಮದ್ಯದ ಚಟಕ್ಕೆ ಬೀಳುವ ಸಾಧ್ಯತೆ ಇದೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘದ ಕಾರ್ಯದರ್ಶಿ ಗೋವಿಂದರಾಜ ಹೆಗ್ಡೆ ಆತಂಕ ವ್ಯಕ್ತಪಡಿಸಿದ್ದಾರೆ.

 
 
 
 
 
 
 
 
 
 
 

Leave a Reply