ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಆವರಣದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮ

ಆಗಸ್ಟ್ 13, ಶನಿವಾರ: ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಆವರಣದಲ್ಲಿ ತ್ರಿವರ್ಣ ಧ್ವಜಾರೋಹಣ , ರಾಷ್ಟ್ರಧ್ವಜ ವಂದನೆ, ವಂದೇ ಮಾತರಂ, ಝಂಡಾ ಊಂಚಾ ರಹೇ ಹಮಾರ ಗೀತೆ ಹಾಗೂ ಕೊನೆಯಲ್ಲಿ ರಾಷ್ಟ್ರಗೀತೆಯೊಂದಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಾಣೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಶ್ರೀ ಸಾಣೂರು ನರಸಿಂಹ ಕಾಮತ್ ರವರು ರಾಷ್ಟ್ರಧ್ವಜಾರೋಹಣಗೈದು,

ಸ್ವಾವಲಂಬಿ, ಸುದ್ರಢ ಹಾಗೂ ಸಮೃದ್ಧ ಭಾರತಕ್ಕಾಗಿ ಸಮರ್ಪಣಾ ಭಾವದಿಂದ ಕ್ರಿಯಾಶೀಲರಾಗಬೇಕೆಂದು

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದೇಶ ಭಾಷಣ ಮಾಡಿದರು.

ಸಾಣೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರು ಹಾಗೂ ರಾಜ್ಯ ಪ್ರಶಸ್ತಿ ವಿಜೇತ ಸಾಣೂರು ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಪ್ರಸಾದ್ ಪೂಜಾರಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ,

ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹರ್ ಘರ್ ತಿರಂಗ ಅಭಿಯಾನವನ್ನು ಯಶಸ್ವಿಗೊಳಿಸುವುದರ ಜೊತೆಗೆ,

ಸಾಣೂರು ಗ್ರಾಮದ ನಾಗರಿಕರೆಲ್ಲರೂ ಪ್ರತಿ ಮನೆ ಮನೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವುದರ ಮೂಲಕ ಸಂಭ್ರಮಿಸಬೇಕೆಂದು ಕರೆ ನೀಡಿದರು.

ಸಾಣೂರು ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಶ್ರೀ ಪ್ರವೀಣ ಶೆಟ್ಟಿಯವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಸಂಘದ ಉಪಾಧ್ಯಕ್ಷರಾದ ಶ್ರೀಮತಿ ಯಶೋಧ ಆರ್ ಸುವರ್ಣ ರವರು ಧನ್ಯವಾದ ಸಮರ್ಪಣೆ ಗೈದರು.

ಈ ಸಂದರ್ಭದಲ್ಲಿ ಸಾಣೂರು ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಸ್ಥಾಪಕ ಕಾರ್ಯದರ್ಶಿ ಹಾಗೂ ಕೃತಕ ಗರ್ಭಧಾರಣ ಕಾರ್ಯಕರ್ತರಾದ ಶ್ರೀ ಜ್ಞಾನದೇವ, ಸಂಘದ ನಿರ್ದೇಶಕರುಗಳು, ಸಿಬ್ಬಂದಿ ವರ್ಗ ಸದಸ್ಯರು ಹಾಗೂ ಸಂಘದ ಹಾಲು ಗ್ರಾಹಕರು ಉಪಸ್ಥಿತರಿದ್ದರು.

ಸಂಘದ ಸದಸ್ಯರು ಮತ್ತು ಗ್ರಾಹಕರಿಗೆ ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಉಚಿತವಾಗಿ ಧ್ವಜಗಳನ್ನು ವಿತರಿಸಲಾಯಿತು ಹಾಗೂ ಕಾರ್ಯಕ್ರಮದ ನಂತರ ಎಲ್ಲರಿಗೂ ಉಪಹಾರ ವ್ಯವಸ್ಥೆಯನ್ನು ಮಾಡಲಾಯಿತು.

 
 
 
 
 
 
 
 
 
 
 

Leave a Reply