Janardhan Kodavoor/ Team KaravaliXpress
30.6 C
Udupi
Sunday, October 2, 2022
Sathyanatha Stores Brahmavara

ಸರಸ್ವತಿ ವಿದ್ಯಾಲಯದಲ್ಲಿ ಕಾರ್ಗಿಲ್ ಹುತಾತ್ಮರ ಸ್ಮರಣೆ

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ರೋಟರಾಕ್ಟ್ ಕ್ಲಬ್ ಗಂಗೊಳ್ಳಿಯ ಸಂಯುಕ್ತ ಸಹಭಾಗಿತ್ವದಲ್ಲಿ ಕಾರ್ಗಿಲ್ ಹುತಾತ್ಮರ ಸ್ಮರಣೆಯ ಕಾರ್ಯಕ್ರಮವನ್ನು ಕಾರ್ಗಿಲ್ ವಿಜಯೋತ್ಸವ ದಿನದಂದು ಆಚರಿಸಲಾಯಿತು. ಸರಸ್ವತಿ ವಿದ್ಯಾಲಯದ ಸಂಸ್ಕೃತ ಉಪನ್ಯಾಸಕ ಎನ್ ಸಿ ವೆಂಕಟೇಶಮೂರ್ತಿ ಕಾರ್ಗಿಲ್ ಹುತಾತ್ಮರಿಗೆ ನುಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ನಮನ ಸಲ್ಲಿಸಲಾಯಿತು. ಪ್ರಾಂಶುಪಾಲೆ ಕವಿತಾ ಎಂ.ಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ರೋಟರಿ ಕ್ಲಬ್ ಅಧ್ಯಕ್ಷೆ ಸುಗುಣ ಆರ್ ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರೋಟರಾಕ್ಟ್ ಕ್ಲಬ್ ಅಧ್ಯಕ್ಷೆ ಶ್ರೇಯಾ ಗಾಣಿಗ ಸ್ವಾಗತಿಸಿದರು. ಎನ್ಎಸ್ಎಸ್ ಘಟಕದ ವಿದ್ಯಾರ್ಥಿ ಮುಖಂಡರಾದ ಆಕಾಶ್ ಪೂಜಾರಿ ಮತ್ತು ಕಿರಣ್ ಉಪಸ್ಥಿತರಿದ್ದರು. ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮವನ್ನು ನಿರ್ವಹಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!