ಸರಸ್ವತಿ ವಿದ್ಯಾಲಯದಲ್ಲಿ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

ಎನ್ಎಸ್ಎಸ್ ಶಿಬಿರದಲ್ಲಿ ಕಲಿತ ಮೌಲಿಕವಾದ ಅಂಶಗಳನ್ನು ತಮ್ಮ ಜೀವನದಲ್ಲಿ ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವುದರ ಮೂಲಕ ವ್ಯಕ್ತಿತ್ವವನ್ನು ಸದೃಢಗೊಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಚೇತನ್ ಶೆಟ್ಟಿ ಕೋವಾಡಿ ಅವರು ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಇನ್ನೊರ್ವ ಮುಖ್ಯ ಅತಿಥಿ ಜಿಎಸ್‌ವಿಎಸ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್ ಗಣೇಶ್ ಕಾಮತ್ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯೇತರ ಚಟುವಟಿಕೆಗಳು ನಮ್ಮ ವೃತ್ತಿ ಜೀವನವನ್ನು ರೂಪಿಸಿಕೊಳ್ಳಲು ಪೂರಕವಾಗಿ ಬಹಳ ಸಹಾಯ ಮಾಡುತ್ತವೆ ಎಂದು ಹೇಳಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಸದಾಶಿವ ನಾಯಕ್ ಎನ್, ಸವಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಉಮೇಶ್ ಕರ್ಣಿಕ್, ಉಪಸ್ಥಿತರಿದ್ದರು. ಶಿಬಿರಾರ್ಥಿ ಶ್ರೇಯ ಖಾರ್ವಿ ಪ್ರಾರ್ಥಿಸಿದರು. ಮಹಿಮಾ ಅತಿಥಿಗಳನ್ನು ಸ್ವಾಗತಿಸಿದರು. ಶಿಬಿರಾರ್ಥಿಗಳಾದ ರಿತೇಶ್ ಎಂ ಜಿ ಅರ್ಜುನ್, ಆಕಾಶ್ ಪೂಜಾರಿ ದೀಕ್ಷಾ ಪೂಜಾರಿ ಶಾಲಿನಿ ತಮ್ಮ ಶಿಬಿರದ ಅನುಭವಗಳನ್ನು ಹಂಚಿಕೊಂಡರು . ಸಂಸ್ಕೃತ ಉಪನ್ಯಾಸಕ ವೆಂಕಟೇಶಮೂರ್ತಿ ಎನ್ ಸಿ, ಕನ್ನಡ ಉಪನ್ಯಾಸಕ ಸುಜಯೇಂದ್ರ ಹಂದೆ ಆಂಗ್ಲ ಭಾಷಾ ಉಪನ್ಯಾಸಕಿ ಸುಪ್ರೀತಾ, ಅಖಿಲ ಕರ್ನಾಟಕ ವೃತ್ತಿ ಶಿಕ್ಷಣ ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಶ್ರೀಧರ ಎನ್ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮವನ್ನು ನಿರ್ವಹಿಸಿದರು ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್ ಕೆ ಪ್ರಾಸ್ತಾವಿಸಿ ವಂದಿಸಿದರು.

 
 
 
 
 
 
 
 
 
 
 

Leave a Reply