ದಿ| ಕರಂಬಳ್ಳಿ ಸಂಜೀವ ಶೆಟ್ಟಿ ಅವರ ಪ್ರತಿಮೆಗೆ ಡಾ| ಧನಂಜಯ ಸರ್ಜಿ ಗೌರವಾರ್ಪಣೆ

ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಅವರು ಉಡುಪಿಯ ಅಂಬಾಗಿಲು ವೃತ್ತದಲ್ಲಿರುವ ಬಿಜೆಪಿ ಹಿರಿಯ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ದಿ! ಕರಂಬಳ್ಳಿ ಸಂಜೀವ ಶೆಟ್ಟಿ ಅವರ ಪ್ರತಿಮೆಗೆ ಮಾಲಾರ್ಪಣೆಗೈದು ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವಾರಾಜ್, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ, ನಿಕಟಪೂರ್ವ ಅಧ್ಯಕ್ಷ ದಾವೂದ್ ಅಬೂಬಕರ್ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply