ಕೊಡವೂರು : ಉಚಿತ ಆರೋಗ್ಯ ತಪಾಸಣಾ ಶಿಬಿರ

ಹಳೆವಿದ್ಯಾರ್ಥಿ ಸಂಘ, ಯುವಕ ಸಂಘ (ರಿ) ಕೊಡವೂರು, ಸ್ವಾವಲಂಬಿ ಭಾರತ ಉಡುಪಿ, ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಪೆ ಉಪಕೇಂದ್ರ ಕೊಡವೂರು, ಸಮುದಾಯ ದಂತ ವೈದ್ಯಕೀಯ ವಿಭಾಗ ಮಣಿಪಾಲ ಹಾಗೂ ಪ್ರಸಾದ್ ನೇತ್ರಾಲಯ ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಆ.12 ರಂದು ಸ್ಥಳೀಯ ವಿಪ್ರಶ್ರೀ ಸಭಾಭವನದಲ್ಲಿ ನಡೆಯಿತು.

ಕೊಡವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣ ದೇವಾಡಿಗ ಶಿಬಿರವನ್ನು ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ನಗರಸಭಾ ಸದಸ್ಯರಾದ ವಿಜಯ ಕೊಡವೂರು ಜವಾಬ್ದಾರಿಯುತ ನಾಗರಿಕರಾದ ನಾವೆಲ್ಲರೂ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಆರೋಗ್ಯ ಉತ್ತಮವಾಗಿದ್ದರೆ ಪಡೆದ ಶಿಕ್ಷಣ,ಗಳಿಸಿದ ಸಂಪತ್ತನ್ನು ನೆಮ್ಮದಿಯಿಂದ ಅನುಭವಿಸಲು ಸಾಧ್ಯ ಎಂದರು.

ಮುಖ್ಯ ಅತಿಥಿಗಳಾಗಿ ಶ್ರೀ ಶಂಕರನಾರಾಯಣ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಟಿ.ರಾಘವೇಂದ್ರ ರಾವ್, ಜಿಲ್ಲಾಸ್ಪತ್ರೆ ಯ ವೈದ್ಯೆ ಡಾ.ಯಶಸ್ವಿ, ಪ್ರಸಾದ್ ನೇತ್ರಾಲಯದ ನೇತ್ರ ತಜ್ಞ ಡಾ.ಗುರು., ಮಣಿಪಾಲ ಸಮುದಾಯ ದಂತ ವೈದ್ಯಕೀಯ ವಿಭಾಗದ ವೈದ್ಯೆರಾದ ಡಾ.ಅನನ್ಯ,ಡಾ.ಸುಮ, ಪ್ರಾಥಮಿಕ ಆರೋಗ್ಯ ಕೇಂದ್ರದ ಮೈತ್ರಿ, ಹಾಗೂ ದಾನಿ ಸುಮಲತಾ ರಮೇಶ್ ಪಾಲನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸುಂದರಿ ಪಾಲನ್ ಕೊಪ್ಪಲತೋಟ ಸ್ಮರಣಾರ್ಥ ಅವರ ಮನೆಯವರು ಅರ್ಥಿಕ ಅಶಕ್ತರ ಮನೆಯ ಇಬ್ಬರು ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚಕ್ಕಾಗಿ ಹಾಗೂ ಇಬ್ಬರು ವಿದ್ಯಾರ್ಥಿಗಳ ಪುಸ್ತಕದ ವೆಚ್ಚಕ್ಕಾಗಿ ಸಹಾಯಧನ ನೀಡಿದರು.
ಕೊಡವೂರು ದಿವ್ಯಾಂಗ ರಕ್ಷಣಾ ಸಮಿತಿಯ ವತಿಯಿಂದ ಓರ್ವ ದಿವ್ಯಾಂಗರಿಗೆ ವೀಲ್ ಚೇರ್ ನೀಡಲಾಯಿತು.ಹಾಗೆಯೇ ಸರ್ಕಾರದ ಜನಪರ ಯೋಜನೆಗಳ ಫಲಾನುಭವಿಗಳ ನೋಂದಣಿ ಮಾಡಲಾಯಿತು.

ಜಿಲ್ಲಾ ಆರೋಗ್ಯ ಅಧಿಕಾರಿ ನಾಗಭೂಷಣ ಉಡುಪ ಆಗಮಿಸಿ ಆರೋಗ್ಯ ಶಿಬಿರ ಆಯೋಜನೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ, ಆರೋಗ್ಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.ಜಿಲ್ಲಾಸ್ಪತ್ರೆ ಯ ಪುಷ್ಪ ಶೆಟ್ಟಿ ಅಭಾ ಕಾರ್ಡ್ ನೋಂದಣಿ ಮತ್ತು ವಿಮೆಯ ಬಗ್ಗೆ ಹಾಗೂ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಶೈಲ ಶ್ಯಾಮನೆರ್ ತಂಬಾಕು ಸೇವನೆಯ ದುಷ್ಪರಿಣಾಮ ಮತ್ತು ನಿಯಂತ್ರಣದ ಕುರಿತು ಮಾಹಿತಿ ನೀಡಿದರು

ಯುವಕ ಸಂಘದ ಅಧ್ಯಕ್ಷ ಪ್ರಭಾತ್ ಕೋಟ್ಯಾನ್ ಸ್ವಾಗತಿಸಿದರು.ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಕೊಡವೂರು ನಿರೂಪಿಸಿ ವಂದಿಸಿದರು.

 
 
 
 
 
 
 
 
 
 
 

Leave a Reply