ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್‌ಗೆ 2021-22 ನೇ ಸಾಲಿನ ಸಾಧನಾ ಪ್ರಶಸ್ತಿ

ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ 2021-22 ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿರುವ ಸರ್ವತೋಮುಖ ಪ್ರಗತಿಗೆ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಶೆಟ್ಟಿ ಹಾಗೂ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಶ್ರೀ ಮಂಜುನಾಥ ಶೆಟ್ಟಿ ರವರನ್ನು ಮಂಗಳೂರಿನಲ್ಲಿ ನಡೆದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಮಹಾಸಭೆಯಲ್ಲಿ ಸನ್ಮಾನಿಸಿ ೨೦೨೧-೨೨ ನೇ ಸಾಲಿನ ಸಾಧನಾ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷರಾದ ಡಾ| ರಾಜೇಂದ್ರ ಕುಮಾರ್ ಮತ್ತು ನಿರ್ದೇಶಕರು, ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಇಂದ್ರಾಳಿ ಜಯಕರ ಶೆಟ್ಟಿ ಹಾಗೂ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕಿನ ನಿರ್ದೇಶಕರಾದ ಶ್ರೀ ಸುಧಾಕರ ಶೆಟ್ಟಿ ಬಿ. ರವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply