ಎಸ್. ಸಿ.ಡಿ.ಸಿ. ಬ್ಯಾಂಕ್ 111ನೇ ಶಾಖೆ ಶುಭಾರಂಭ

ಉಡುಪಿ: ದ.ಕ. ಕೇಂದ್ರ ಸಹಕಾರಿ (ಎಸ್‌ಸಿಡಿಸಿಸಿ) ಬ್ಯಾಂಕಿನ 111ನೇ ಶಾಖೆ ಮೇ 2ರಂದು ಮಣಿಪಾಲ ಕಮರ್ಷಿಯಲ್ ಕಾಂಪ್ಲೆಕ್ಸ್‌ನ ನೆಲ ಅಂತಸ್ತಿನಲ್ಲಿ ಸಂಪೂರ್ಣ ಗಣಕೀಕೃತ, ಹವಾನಿಯಂತ್ರಿತ ಶಾಖೆ, ಆರ್‌ಟಿಜಿಎಸ್, ನೆಫ್ಟ್, ರೂಪೇ ಕಾರ್ಡ್ (ಎಟಿಎಂ) ಹಾಗೂ ಕೋರ್ ಬ್ಯಾಂಕಿಂಗ್ ಸೌಲಭ್ಯದೊಂದಿಗೆ ಶುಭಾರಂಭಗೊಳ್ಳಲಿದೆ ಎಂದು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಡಾl ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.

ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಎಸ್‌ಸಿಡಿಸಿಸಿ ಬ್ಯಾಂಕ್ ಮಣಿಪಾಲ ಶಾಖೆಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸುವರು. ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶ ಉದ್ಘಾಟಿಸುವರು.

ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಹಾಗೂ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರಕುಮಾರ್ ಅಧ್ಯಕ್ಷತೆಯನ್ನು ವಹಿಸುವರು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ದೀಪ ಪ್ರಜ್ವಲನೆ ಮಾಡಲಿದ್ದು, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ನವೋದಯ ಜಂಟಿ ಭಾದ್ಯತಾ ಗುಂಪುಗಳಿಗೆ ಸಾಲ ಪತ್ರ ವಿತರಿಸುವರು.

ಬೆಂಗಳೂರು ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ, ಬೆಳ್ಳಿ ಪ್ರಕಾಶ್ ನೂತನ ಸ್ವಸಹಾಯ ಗುಂಪುಗಳನ್ನು ಉದ್ಘಾಟಿಸುವರು. ಶಾಖೆಯ ಭದ್ರತಾ ಕೋಶವನ್ನು ಉಡುಪಿ ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸುವರು.

ನೂತನ ಶಾಖೆಯ ಗಣಕೀಕರಣವನ್ನು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಲಾಕರ್ ಕೀ ಹಸ್ತಾಂತರವನ್ನು ಉದ್ಯಮಿ ನಾಡೋಜ ಡಾl ಜಿ. ಶಂಕರ್ ನೆರವೇರಿಸುವರು.

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್. ದೇವರಾಜ್ ಅವರು ಚೈತನ್ಯ ವಿಮಾ ಚೆಕ್ ವಿತರಣೆ ನೆರವೇರಿಸಲಿದ್ದು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ, ದಿ ಕೆನರಾ ಲ್ಯಾಂಡ್ ಇನ್‌ವೆಸ್ಟ್‌ಮೆಂಟ್ಸ್ ಮಣಿಪಾಲ ವ್ಯವಸ್ಥಾಪಕ ನಿರ್ದೇಶಕ ಟಿ. ಅಶೋಕ್ ಪೈ, ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ, ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರ ನಾಯಕ್, ಉಜ್ವಲ್ ಡೆವಲಪರ್ಸ್ ಮಾಲೀಕ ಪುರುಷೋತ್ತಮ ಶೆಟ್ಟಿ ಗೌರವ ಅತಿಥಿಗಳಾಗಿ ಭಾಗವಹಿಸುವರು ಎಂದು ಡಾl ದೇವಿಪ್ರಸಾದ್ ತಿಳಿಸಿದರು.

ಮೊಬೈಲ್ ಬ್ಯಾಂಕಿಂಗ್ ವಿಸ್ತರಣೆ

ಎಸ್‌.ಸಿ.ಡಿ.ಸಿ.ಸಿ ಬ್ಯಾಂಕ್ ‘ಗ್ರಾಹಕರ ಮನೆ ಬಾಗಿಲಿಗೆ ಮೊಬೈಲ್ ಬ್ಯಾಂಕಿಂಗ್’ ಯೋಜನೆಯನ್ನು 2007ರ ಡಿಸೆಂಬರ್ 19ರಂದು ಜಾರಿಗೆ ತಂದಿದೆ. ಸುಸಜ್ಜಿತ ವಾಹನದ ಮೂಲಕ ನಿರ್ದಿಷ್ಟ ದಿನಗಳಲ್ಲಿ, ನಿರ್ದಿಷ್ಟ ಸಮಯದಲ್ಲಿ, ನಿರ್ದಿಷ್ಟ ಸ್ಥಳಗಳಲ್ಲಿ ಬ್ಯಾಂಕಿಂಗ್ ವ್ಯವಹಾರ ನಡೆಯುತ್ತಿದ್ದು, ಇದು ಮಂಗಳೂರಿಗೆ ಮಾತ್ರ ಸೀಮಿತವಾಗಿತ್ತು. ಇದೀಗ ಉಡುಪಿ ಜಿಲ್ಲೆಗೂ ಈ ಯೋಜನೆಯನ್ನು ವಿಸ್ತರಿಸಲಾಗುತ್ತಿದೆ.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ (ನಬಾರ್ಡ್), ಬೆಂಗಳೂರು ಮಹಾಪ್ರಬಂಧಕ ನೀರಜ್ ಕುಮಾರ್ ವರ್ಮ ಅವರು ಉಡುಪಿ ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆಗೆ ಚಾಲನೆ ನೀಡುವರು.

 
 
 
 
 
 
 
 
 

Leave a Reply