ಎಸ್.ಡಿ.ಎಮ್. ಆಯುರ್ವೇದ ಕಾಲೇಜಿನಲ್ಲಿ ಯುವ ದಿನಾಚರಣೆ – ರಕ್ತದಾನ ಮಾಹಿತಿ ಕಾರ್ಯಾಗಾರ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ, ಕುತ್ಪಾಡಿ ಇದರ ರೆಡ್‌ಕ್ರಾಸ್ ಘಟಕ ಹಾಗೂ ಎನ್ನೆಸ್ಸೆಸ್ ಘಟಕಗಳ ವತಿಯಿಂದ ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವಿಕೆ ಘಟಕದ ಸಹಯೋಗದೊಂದಿಗೆ ಮಹಾವಿದ್ಯಾಲಯದಲ್ಲಿ ಯುವ ದಿನಾಚರಣೆಯ ಅಂಗವಾಗಿ ರಕ್ತದಾನ ಮಾಹಿತಿ ಕಾರ್ಯಾಗಾರವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ. ಇವರ ಮಾರ್ಗದರ್ಶನದಂತೆ ಕಾಲೇಜು ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮುದಾಯ ಸೇವಾ ಘಟಕದ ಮುಖ್ಯಸ್ಥರಾದ ಡಾ. ಎಸ್.ಆರ್. ಮೊಹರೆರ್ ವಹಿಸಿದ್ದರು. ಅತಿಥಿಗಳಾದ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಮುಖ್ಯಸ್ಥರಾದ ಡಾ. ಚಿದಾನಂದ ಸಂಜುರವರು ‘ಏಡ್ಸ್ ತಡೆಗಟ್ಟುವಲ್ಲಿ ಯುವ ಜನರ ಪಾತ್ರವನ್ನು ತಿಳಿಯಪಡಿಸಿದರು. 

ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯರವರು ಯುವ ಜನತೆ ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು. 
 
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಣಿಪಾಲ ಕೆ.ಎಮ್.ಸಿ. ರಕ್ತನಿಧಿ ಘಟಕದ ಸಹಾಯಕ ಪ್ರಾಧ್ಯಾಪಕಿ ಡಾ. ಚೆನ್ನ ದೀಪಿಕಾರವರು ರಕ್ತದಾನ ಮಾಡುವ ವಿಧಾನಗಳನ್ನು ವಿವರಿಸಿದರು. ಈ ಸಂದರ್ಭದಲ್ಲಿ ಯುವ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಭಿತ್ತಿ ಚಿತ್ರ ಸ್ಪರ್ಧೆಯ ವಿಜೇತರಿಗೆ  ಬಹುಮಾನ ವಿತರಿಸಲಾಯಿತು. ಎಸ್.ಡಿ.ಎಮ್. ಆಯುರ್ವೇದ ಕಾಲೇಜಿನ ತೃತೀಯ ಬಿಎಎಮ್‌ಎಸ್ ವಿದ್ಯಾರ್ಥಿನಿ ಕು. ಇಂಚರ ವೈ.ಎಮ್. ತೃತೀಯ ಸ್ಥಾನ ಗಳಿಸಿದರು. 
 
ಶ್ರೀ ಮಹಾಬಲೇಶ್ವರ ಜಿಲ್ಲಾ ಕಾರ್ಯಕ್ರಮ ನಿರ್ವಾಹಕರು, ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಘಟಕ, ಉಡುಪಿ ಇವರು ಎಲ್ಲರನ್ನು ಸ್ವಾಗತಿಸಿದರು. ಕಾಲೇಜಿನ ರೆಡ್‌ಕ್ರಾಸ್ ಘಟಕದ ಮುಖ್ಯಸ್ಥರಾದ ಡಾ. ಮೊಹಮ್ಮದ್ ಫೈಸಲ್ ‘ಕೋವಿಡ್ -19, ರಕ್ತದಾನ ಹಾಗೂ ಏಡ್ಸ್ ಜಾಗೃತಿಯ ಪ್ರತಿಜ್ಞಾವಿಧಿ ಬೋಧಿಸಿದರು.ರಾಷ್ಟ್ರೀಯ ಸೇವಾಯೋಜನಾಧಿಕಾರಿ ಡಾ. ವಿದ್ಯಾಲಕ್ಷ್ಮೀ ಕೆ. ವಂದಿಸಿದರು. ಡಾ. ಅಂಜು ಬಾಲಕೃಷ್ಣನ್ ಪ್ರಾರ್ಥಿಸಿದರು. ರೆಡ್‌ಕ್ರಾಸ್‌ನ ಡಾ. ಲೇಖನ್ ಕಾರ್ಯಕ್ರಮ ನಿರೂಪಿಸಿದರು. 
 
 
 
 
 
 
 
 
 
 
 

Leave a Reply