ಎಸ್ ಡಿ.ಎಮ್ ಆಯುರ್ವೇದ ಕಾಲೇಜಿನಲ್ಲಿ ರಾಷ್ಟ್ರೀಯ ಆಯುರ್ವೇದ ದಿನ 2021

ರಾಷ್ಟ್ರೀಯ ಆಯುರ್ವೇದ ದಿನದ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು,  ಭಾವಪ್ರಕಾಶ ಸಭಾಂಗಣದಲ್ಲಿ ಪ್ರಸ್ತುತ ಜೀವನಶೈಲಿಯಲ್ಲಿ ಆಹಾರ ಮತ್ತು ಆರೋಗ್ಯ ವಿಷಯದ ಬಗ್ಗೆ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿತ್ತು. 
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಜಿರೆ, ಎಸ್.ಡಿ.ಎಂ. ನ್ಯಾಚುರೋಪತಿ ಹಾಗೂ ಯೋಗ ಕಾಲೇಜಿನ ಡೀನ್ ಹಾಗೂ ಪ್ರಾಧ್ಯಾಪಕರಾದ ಡಾ. ಗೀತಾ ಬಿ. ಶೆಟ್ಟಿ ಇವರು ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ. ವಿ. ಇವರು ವಹಿಸಿದ್ದರು.
ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ನಾಗರಾಜ್ ಎಸ್., ಸ್ನಾತಕೋತ್ತರ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ನಿರಂಜನ್ ರಾವ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ವೀರ ಕುಮಾರ ಕೆ., ಪ್ರಾಧ್ಯಾಪಕರು ಹಾಗೂ ಬಾಲರೋಗ ವಿಭಾಗ ಮುಖ್ಯಸ್ಥರಾದ ಡಾ. ಪೃಥ್ವಿರಾಜ್ ಪುರಾಣಿಕ್ ರವರು ಉಪಸ್ಥಿತರಿದ್ದರು. 
ವಿಭಾಗದ ಮುಖ್ಯಸ್ಥರಾದ ಡಾ. ಪೃಥ್ವಿರಾಜ್  ಪುರಾಣಿಕ್  ಸ್ವಾಗತ ಭಾಷಣವನ್ನು ಮಾಡಿದರು, ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರಾದ ಡಾ. ಮಮತಾ ಕೆ.ವಿ. ಯವರು ಆಯುರ್ವೇದ ದಿನಾಚರಣೆ ಮಹತ್ವದ ಕುರಿತು ಮಾತನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಡಾಕ್ಟರ್ ಗೀತಾ ಬಿ. ಶೆಟ್ಟಿ ಪ್ರಸ್ತುತ ಜೀವನಶೈಲಿಯಲ್ಲಿ ಆಹಾರ ಮತ್ತು ಆರೋಗ್ಯ ಎಂಬ ವಿಷಯದ ಬಗ್ಗೆ ಸರಳವಾಗಿ  ವಿವರವನ್ನು ನೀಡಿದರು. ಜೊತೆಗೆ ಪಂಚಸೂತ್ರ, ವಿವಿಧ ರೀತಿಯ ಆಹಾರ ಪದ್ಧತಿ ಹಾಗೂ ಪಾನೀಯಗಳನ್ನು ಕೂಡ ವಿವರಿಸಿದರು.  
ವಿಭಾಗದ ಮುಖ್ಯಸ್ಥರಾದ ಡಾ. ಪೃಥ್ವಿರಾಜ್ ಪುರಾಣಿಕ್  ಹಾಗೂ ವಿಭಾಗದ ಎಲ್ಲಾ ಉಪನ್ಯಾಸಕರು ಕಾರ್ಯಕ್ರಮವನ್ನು ಸಂಯೋಜಿಸಿದ್ದರು. ಬಾಲರೋಗ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಶರಶ್ಚಂದ್ರರವರು ವಂದನಾರ್ಪಣೆಯನ್ನು ಸಲ್ಲಿಸಿದರು. ಸಹಾಯಕ ಪ್ರಾಧ್ಯಾಪಕರಾದ ಡಾ. ನಾಗರತ್ನ ಹಾಗೂ ಡಾ. ಚಿತ್ರಲೇಖ ಸಹಕರಿಸಿದರು. ಡಾ. ಐಶ್ವರ್ಯ ಕಾರ್ಯಕ್ರಮವನ್ನು ನಿರೂಪಿಸಿದರು.
 
 
 
 
 
 
 
 
 
 
 

Leave a Reply