ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಮೈಸೂರು ವಲಯಮಟ್ಟದ ಟೇಬಲ್ ಟೆನ್ನಿಸ್ ಕ್ರೀಡಾಕೂಟ

ದಿನಾಂಕ 29 ಜುಲೈ 2022, ಶುಕ್ರವಾರದಂದು ಉಡುಪಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಮೈಸೂರು ವಲಯಮಟ್ಟದ ಟೇಬಲ್ ಟೆನ್ನಿಸ್ ಕ್ರೀಡಾಕೂಟವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ ಅವರು ಆರೋಗ್ಯ ದೃಷ್ಟಿಯಿಂದ ಕ್ರೀಡಾ ಮಹತ್ವದ ಬಗ್ಗೆ ಮಾತನಾಡಿದರು. ತದನಂತರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ. ಅವರು ರೋಗ ನಿವಾರಣೆಯಲ್ಲಿ ಕ್ರೀಡಾ ಹಾಗೂ ಯೋಗದ ಮಹತ್ವ ಮತ್ತು ಕೊಡುಗೆಯ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಸುರೇಶ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ನಾಗರಾಜ್ ಎಸ್., ಎಸ್.ಡಿ.ಎಮ್. ಆಯುರ್ವೇದ ಕಾಲೇಜಿನ ಸ್ನಾತಕೋತ್ತರ ಹಾಗೂ ಪಿ.ಎಚ್.ಡಿ ಅಧ್ಯಯನದ ಡೀನ್‌ರಾದ ಡಾ. ನಿರಂಜನ್ ರಾವ್, ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್‌ರಾದ ಡಾ. ವೀರಕುಮಾರ ಕೆ., ಕಾಲೇಜಿನ ಕ್ರೀಡಾ ಇಲಾಖೆಯ ಮುಖ್ಯಸ್ಥರಾದ ಡಾ. ಪೃಥ್ವಿರಾಜ್ ಪುರಾಣಿಕ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಆದರ್ಶ್ ಬಿ. ಶೆಟ್ಟಿಯವರು ಉಪಸ್ಥಿತರಿದ್ದರು.
ಸಂಜೆ ೪ ಗಂಟೆಗೆ ಎಸ್.ಡಿ.ಎಮ್. ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ. ಅವರಿಂದ ಬಹುಮಾನ ವಿತರಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಪುರುಷರ ವಿಭಾಗದಲ್ಲಿ ಪ್ರಥಮ ಬಹುಮಾನವನ್ನು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಶಿವಮೊಗ್ಗ, ದ್ವಿತೀಯ ಮೈಸೂರು ವೈದ್ಯಕೀಯ ಕಾಲೇಜು, ಮೈಸೂರು ಹಾಗೂ ಮಹಿಳೆಯರ ವಿಭಾಗದಲ್ಲಿ ಪ್ರಥಮ ಕೆವಿಜಿ ಡೆಂಟಲ್ ಕಾಲೇಜು, ಸುಳ್ಯ, ದ್ವಿತೀಯ ಎಸ್.ಡಿ.ಎಮ್. ಆಯುರ್ವೇದ ಕಾಲೇಜು, ಉಡುಪಿ ಇವರು ಪಡೆದುಕೊಂಡರು. ಸಹಪ್ರಾಧ್ಯಾಪಕರಾದ ಡಾ. ಸಂದೇಶ್ ಕುಮಾರ್ ಶೆಟ್ಟಿ ಧನ್ಯವಾದಗಳನ್ನು ಸಮರ್ಪಿಸಿದರು.
ಕಾರ್ಯಕ್ರಮವನ್ನು ಕುಮಾರಿ ಲಾವಣ್ಯರವರು ನಿರೂಪಿಸಿದರು.

 
 
 
 
 
 
 
 
 
 
 

Leave a Reply