ಶಿಷ್ಯೋಪನಯನ ಮತ್ತು ವಾರ್ಷಿಕೋತ್ಸವ ಸಮಾರಂಭ

 ಉಡುಪಿ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ 24ನೇ ಶಿಷ್ಯೋಪನಯನ ಸಮಾರಂಭವು ಪ್ರಾತಃ ಕಾಲದ ಸಮಯದಲ್ಲಿ ನಡೆದ ಧನ್ವಂತರಿ ಹೋಮದೊಂದಿಗೆ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರ ಸಮಕ್ಷಮದಲ್ಲಿ ನೆರವೇರಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ.ಯವರು ವಹಿಸಿ ಮಾತನಾಡುತ್ತಾ ‘ದೀಕ್ಷಾ ಬದ್ಧರಾದ ವಿದ್ಯಾರ್ಥಿಗಳು ಕಾಲೇಜಿನ ಎಲ್ಲಾ ಸೌಕರ್ಯಗಳ ಸದುಪಯೋಗವನ್ನು ಪಡೆದುಕೊಂಡು ಉತ್ತಮ ವೈದ್ಯರಾಗುವ ತಮ್ಮ ಕನಸನ್ನು ನನಸಾಗಿಸಲು ಪ್ರಯತ್ನಿಸುವಂತಾಗಲಿ’ ಎಂದು ಶುಭ ಹಾರೈಸಿದರು.
 ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಾಸನ ಎಸ್.ಡಿ.ಎಮ್. ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಸನ್ನ ಎನ್. ರಾವ್‌ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ‘ಆಯುರ್ವೇದವು ವಿಶ್ವಮನ್ನಣೆಯನ್ನು ಗಳಿಸುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ನಿಷ್ಠೆಯಿಂದ ಆಯುರ್ವೇದದ ಅಧ್ಯಯನ ಹಾಗೂ ಸಂಶೋಧನೆಯಲ್ಲಿ ತೊಡಗಿಕೊಳ್ಳುವಂತೆ ಕರೆ ನೀಡಿದರು.
ಅತಿಥಿಗಳಾಗಿ ಆಗಮಿಸಿದ ಹಾಸನ ಎಸ್.ಡಿ.ಎಮ್. ಆಯುರ್ವೇದ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಶೈಲಜಾ ಯುರವರು ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಶ್ಲಾಘಿಸಿ ದರು. ವೈದ್ಯಕೀಯ ಅಧೀಕ್ಷಕರಾದ ಡಾ. ನಾಗರಾಜ್ ಎಸ್.ರವರು ಉಪನಯನ ಸಂಸ್ಕಾರದಿ೦ದ ವಿದ್ಯಾರ್ಥಿಗಳ ಮೌಲ್ಯವರ್ಧನೆ ಯಾಗುವುದು ಎಂದು ನುಡಿದು ನೆರೆದಿರುವ ಎಲ್ಲರನ್ನೂ ಸ್ವಾಗತಿಸಿದರು.
ಶೈಕ್ಷಣಿಕ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಲತಾ ಕಾಮತ್‌ರವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ಬೋಧನೆಯನ್ನು ನೆರವೇರಿ ಸಿದರು. ಆಡಳಿತ ವಿಭಾಗದ ಮುಖ್ಯಸ್ಥರಾದ ಡಾ. ವೀರಕುಮಾರ ಕೆ.  ವಾರ್ಷಿಕ ವರದಿ ವಾಚನ ಮಾಡಿದರು. ಸ್ನಾತಕ ವಿಭಾಗದ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಜನೀಶ್ ವಿ. ಗಿರಿ ಹಾಗೂ ಸ್ನಾತಕೋತ್ತರ ಹಾಗೂ ಪಿಎಚ್.ಡಿ ಅಧ್ಯಯನ ಕೇಂದ್ರದ ಮುಖ್ಯಸ್ಥರಾದ ಡಾ. ಅಶೋಕ್ ಕುಮಾರ್ ಬಿ.ಎನ್.ರವರು ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ಪಡೆದ ವಿದ್ಯಾರ್ಥಿ ಗಳನ್ನು ಪರಿಚಯಿಸಿದರು. ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಶರೀರ ಕ್ರಿಯಾ ವಿಭಾಗದ ಮುಖ್ಯಸ್ಥರಾದ ಡಾ. ಎಸ್.ಆರ್. ಮೊಹರೆರ್ ಮತ್ತು ದ್ರವ್ಯಗುಣ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪೂರ್ಣಿಮಾ ಎ.ರವರು  ಪರಿಚಯಿಸಿದರು.

ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾದ ಕು. ಶ್ರೀನಿಧಿ ಎಸ್. ಶೆಟ್ಟಿ ವಿದ್ಯಾರ್ಥಿ ಸಂಘದ ವರದಿಯನ್ನು ವಾಚಿಸಿದರು. ಶಿಷ್ಯೋಪ ನಯನ ಹಾಗೂ ವಾರ್ಷಿಕೋತ್ಸವದ ಪ್ರಯುಕ್ತ ಬಂದ ಶುಭ ಸಂದೇಶ ವಾಚನವನ್ನು ಸ್ನಾತಕೋತ್ತರ ವಿದ್ಯಾರ್ಥಿ ಪ್ರತಿನಿಧಿಯಾದ ಡಾ. ಪಲ್ಲವಿ ಪೂಜಾರಿ ನೆರವೇರಿಸಿದರು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ವಿನಾಯಕ ಜೋಸ್  ವಂದಿಸಿದರು. ಸಂಹಿತಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಮಹಾಲಕ್ಷ್ಮೀ ಎಮ್.ಎಸ್. ಹಾಗೂ ಅಗದತಂತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಶುಭ ಪಿ.ಯು ಕಾರ್ಯಕ್ರಮವನ್ನು ನಿರೂಪಿಸಿದರು. ಸಹಪ್ರಾಧ್ಯಾಪಕರಾದ ಡಾ. ವಿಜಯೇಂದ್ರ ಭಟ್, ಡಾ. ಲಿಖಿತಾ ಡಿ.ಎನ್. ಮತ್ತು ಡಾ. ಅರುಣ್ ಕುಮಾರ್ ಕಾರ್ಯಕ್ರಮವನ್ನು ಸಂಯೋಜಿಸಿದ್ದರು. ಆನಂತರ ‘ಅಂಕುರ’ ಮತ್ತು ‘ಸಂಭ್ರಮ’ ಎಂಬ ಶೀರ್ಷಿಕೆಯಡಿ ಸಾಂಸ್ಕೃತಿಕ  ಕಾರ್ಯಕ್ರಮಗಳು ಜರುಗಿದವು.
 
 
 
 
 
 
 
 
 
 
 

Leave a Reply