ಸ್ಪಿನ್ ದಿಗ್ಗಜ ಆಸ್ಟ್ರೇಲಿಯಾದ ಶೇನ್ ವಾರ್ನ್ ನಿಧನ

ವಿಶ್ವ ಕ್ರಿಕೆಟ್ ನ ಸ್ಪಿನ್ ದಿಗ್ಗಜ ಆಸ್ಟ್ರೇಲಿಯಾದ ಶೇನ್ ವಾರ್ನ್ ಹೃದಯಾಘಾತದಿಂದ ಹಠಾತ್ ನಿಧನವಾಗಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು. ಶೇನ್ ವಾರ್ನ್ ನಿಧನವಾಗಿರುವ ಬಗ್ಗೆ ಆಸ್ಟ್ರೇಲಿಯಾದ ಫಾಕ್ಸ್ ಕ್ರಿಕೆಟ್ ವರದಿ ಮಾಡಿದೆ.

ಹೃದಯಾಘಾತದಿಂದ ಸಾವು ಸಂಭವಿಸಿರುವ ಬಗ್ಗೆ ಶಂಕೆ ಇದ್ದು, ಶೇನ್ ವಾರ್ನ್ ಹಠಾತ್ ನಿಧನಕ್ಕೆ ವಿಶ್ವ ಕ್ರಿಕೆಟ್ ದಿಗ್ಭಮೆ ವ್ಯಕ್ತಪಡಿಸಿದೆ. ಶುಕ್ರವಾರ ಮುಂಜಾನೆ ರೋಡ್ ಮಾರ್ಷ್ ನಿಧನಕ್ಕೆ ಸಂತಾಪ ಸೂಚಿಸಿ ಕೆಲವೇ ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಶೇನ್ ವಾರ್ನ್ ನಿಧನ ಸುದ್ದಿ ವಿಶ್ವ ಕ್ರಿಕೆಟ್ ಗೆ ಬರ ಸಿಡಿಲಿನಂತೆ ಅಪ್ಪಳಿಸಿದೆ.

ಆಸ್ಟ್ರೇಲಿಯಾ ಕ್ರಿಕೆಟ್ ದಂತಕಥೆ ಮತ್ತು ಸಾರ್ವಕಾಲಿಕ ಶ್ರೇಷ್ಠ ಲೆಗ್ ಸ್ಪಿನ್ನರ್ ಶೇನ್ ವಾರ್ನ ನಿಧನರಾಗಿರುವ ಬಗ್ಗೆ ಅವರ ಮ್ಯಾನೇಜ್ ಮೆಂಟ್ ಕಂಪನಿ ಸಂಕ್ಷಿಪ್ತ ಪದಗಳ ಹೇಳಿಕೆಯನ್ನು ಪ್ರಕಟ ಮಾಡಿದೆ.

“ತಮ್ಮ ಮನೆಯಲ್ಲಿ ಯಾವುದೇ ಪ್ರತಿಕ್ರಯೆ ಇಲ್ಲದೇ ಬಿದ್ದ ರೀತಿಯಲ್ಲಿ ಕಂಡು ಬಂದಿದ್ದರು. ವೈದ್ಯಕೀಯ ಸಿಬ್ಬಂದಿಯ ಅವಿರತ ಪ್ರಯತ್ನದ ಹೊರತಾಗಿಯೂ ಅವರನ್ನು ಜೀವಂತವಾಗಿಡಲು ಸಾಧ್ಯವಾಗಿಲ್ಲ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 
 
 
 
 
 
 
 
 
 
 

Leave a Reply