ಸರಕಾರಿ ಸಂಯುಕ್ತ ಪ್ರೌಢಶಾಲೆ ಶೆಟ್ಟಿಬೆಟ್ಟುವಿನಲ್ಲಿ ವನಮಹೋತ್ಸವ

ಉಡುಪಿ: ಸರಕಾರಿ ಸಂಯುಕ್ತ ಪ್ರೌಢ ಶಾಲೆ ಶೆಟ್ಟಿಬೆಟ್ಟು ಇದರ ಆಶ್ರಯದಲ್ಲಿ ದರಿತ್ರಿ ಇಕೋ ಕ್ಲಬ್,ಮತದಾರರ ಸಾಕ್ಷರತಾ ಕ್ಲಬ್ ಮತ್ತು ಎನ್ ಸಿ ಸಿ ಕಾಪ್೯ ವತಿಯಿಂದ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿಎಂಸಿ ಉಪಾಧ್ಯಕ್ಷರಾದ ಶ್ರೀಯುತ ರಾಮದಾಸ್ ನಾಯಕ್ ವಹಿಸಿಕೊಂಡಿದ್ದರು. ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಉಡುಪಿ ಇಲ್ಲಿನ ಪರಿಸರ ಅಧಿಕಾರಿಗಳಾದ ಶ್ರೀ ಲಕ್ಷ್ಮಿಕಾಂತ್ ಅವರು ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.
ಉಪ ಪರಿಸರ ಅಧಿಕಾರಿಗಳಾದ ಶ್ರೀಮತಿ ಪ್ರಮೀಳಾ ಸಮಯೋಚಿತ ಸಲಹೆಯನ್ನು ನೀಡಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶ್ರೀದೇವಿ ಬಾಯಿ ಸ್ವಾಗತಿಸಿ, ಶ್ರೀಮತಿ ಸುಜಾತ ಕುಲಕರ್ಣಿ ವಂದಿಸಿದರು.
ಶ್ರೀಮತಿ ಮಾಲತಿ ಕಾರ್ಯಕ್ರಮ ನಿರೂಪಿಸಿದರು.

Leave a Reply