ಉಡುಪಿ ಶಿರೂರು ಮಠ ಪೀಠಾಧಿಪತಿ ನೇಮಕ ವಿವಾದ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಉಡುಪಿಯ ಅಷ್ಟ ಮಠಗಳಲ್ಲಿ ಒಂದಾದ ಶಿರೂರು ಮಠದ ಮಠಾಧೀಶರಾಗಿ 16 ವರ್ಷದ ಅಪ್ರಾಪ್ತರನ್ನು ಪೀಠಾಧಿಪತಿಯಾಗಿ ಪಟ್ಟಾಭಿಷೇಕ ಮಾಡಿದ್ದನ್ನು  ವಿರೋಧ ವ್ಯಕ್ತಪಡಿಸಿ ಸಲ್ಲಿಸ ಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಮನವಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಗುರುವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. 
ಕರ್ನಾಟಕ ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠವು ತೀರ್ಪನ್ನು ಕಾಯ್ದಿರಿಸುವ ಮೊದಲು ಎರಡೂ ಕಡೆಯವರಿಂದ ಸುದೀರ್ಘ ವಿಚಾರಣೆ ನಡೆಸಿತು. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಹಾಗೂ ಜಸ್ಟೀಸ್‌ ಸಚಿನ್‌ ಶಂಕರ್‌ ಮಗದುಂ ಅವರ ನೇತೃತ್ವದ ವಿಭಾಗೀಯ ಪೀಠವು 4 ಗಂಟೆಗಳಿಗೂ ಹೆಚ್ಚು ಕಾಲ ವಾದ – ವಿವಾದವನ್ನು ಆಲಿಸಿತು.

16 ವರ್ಷದ ವೇದವರ್ಧನ ತೀರ್ಥರನ್ನು ಉಡುಪಿಯ ಶಿರೂರು ಮಠದ ಪೀಠಾಧಿಪತಿಯಾಗಿ ಪಟ್ಟಾಭಿಷೇಕ ಮಾಡಲಾಗಿದ್ದು, ಅಪ್ರಾಪ್ತರನ್ನು ಪೀಠಾಧಿಪತಿಯಾಗಿಸುತ್ತಿರುವುದನ್ನು ವಿರೋಧಿಸಿ ರಾಜ್ಯ ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಲಾಗಿತ್ತು.

 
 
 
 
 
 
 
 
 
 
 

Leave a Reply