ಸಂತ ಮೇರಿ ಮಹಾವಿದ್ಯಾಲಯ, ಶಿರ್ವದಲ್ಲಿ ‘ರಾಷ್ಟ್ರೀಯ ಭೂ-ಯುವಸೇನಾ ‘ಎನ್.ಸಿ.ಸಿಯ ವಿಶ್ವ ಪರಿಸರ ದಿನಾಚರಣೆ

 ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಡಾ!ಹೆರಾಲ್ಡ್ ಐವನ್ ಮೋನಿಸ್ ರವರು ಪ್ರಕೃತಿಯ ರಕ್ಷಣೆ ಮತ್ತು ಪೋಷಣೆ ಯನ್ನು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಬದಲಾವಣೆಗೊಂಡ ವಾತಾವರಣವನ್ನು ನಾವು ನೋಡುತ್ತಿದ್ದೇವೆ. ನಮ್ಮ ಪರಿಸರ ರಕ್ಷಣೆ ಮತ್ತು ಗಿಡಗಳ ಪೋಷಣೆ ಯನ್ನು ಮಾಡದಲ್ಲಿ ಮುಂದೆ ಮುಂದಿನ ಪೀಳಿಗೆಗಳಿಗೆ ಹಾಗೂ ಎಲ್ಲ ಜೀವರಾಶಿಗಳಿಗೆ, ಆಮ್ಲಜನಕ ಸೇರಿದಂತೆ ಅನೇಕ ಸವಾಲುಗಳು ಎದುರಿಸಬೇಕಾಗುತ್ತದೆ. ಎನ್ ಸಿಸಿ ಕೆಡೆಟ್ಗಳು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡು ಪರಿಸರ ಕಾಳಜಿ ಮಾಡುವ ಮೂಲಕ ಸಮಾಜದ ಒಳಿತಿಗಾಗಿ ಇತರರಿಗೆ ಮಾದರಿ ಮಾದರಿಯಾಗಬೇಕು ಎಂದು ಅವರ ಕಾರ್ಯವನ್ನು ಶ್ಲಾಘಿಸಿ ಅಧ್ಯಕ್ಷ ನೆಲೆಯಲ್ಲಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದಂತಹ ಇಂಟರ್ ಗ್ರೂಪ್ ಶೂಟಿಂಗ್ ಕಾಂಪಿಟೇಶನ್ ತರಬೇತಿಯಲ್ಲಿ ಭಾಗವಹಿಸಿ ಕಾಲೇಜಿನ ಕಿತಿ೯ಯನ್ನು ಉಜ್ವಲ ಗೊಳಿಸಿದ ಕೆಡೆಟ್ ಆಶಿಶ್ ಪ್ರಸಾದ್ ನನ್ನು ಅಭಿನಂದಿಸಲಾಯಿತು.

ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಅವರು ವಿಶ್ವ ಪರಿಸರ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು ಮತ್ತು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು. ಕ್ಯಾಡೆಟ್ ಸುಶ್ಮಿತಾ ಎಸ್ ಅಮೀನ್ ವಿಶ್ವ ಪರಿಸರ ದಿನಾಚರಣೆಯ ಪ್ರಾಮುಖ್ಯತೆಯನ್ನು ಮತ್ತು ಉದ್ದೇಶವನ್ನು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಉಪನ್ಯಾಸಕಿ ಯಶೋದ, ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ ,ಜೂನಿಯರ್ ಅಂಡರ್ ಆಫೀಸರ್ ಹರ್ಷಿತಾ, ಸುರಕ್ಷಾ ಉಪಸ್ಥಿತರಿದ್ದರು.ಕಂಪನಿ ಸರ್ಜೆಂಟ್ ಕ್ವಾರ್ಟರ್ ಮಾಸ್ಟರ್ ಮೋಹಿತ ಎನ್ ಸಾಲಿಯಾನ್,ಕಾರ್ಪೋರಲ್ ಧೀರಜ್, ಅನುಪ್ ನಾಯಕ ಮತ್ತಿತರರು ಸಹಕರಿಸಿದರು. ಕ್ಯಾಡೆಟ್ ವರ್ಷಿತ ಸರ್ವರನ್ನೂ ಸ್ವಾಗತಿಸಿ , ಕ್ಯಾಡೆಟ್ ಪೂಜಾ ವಂದಿಸಿದರು. ಲ್ಲ್ಯಾನ್ಸ್ ಕಾರ್ಪೊರಲ್ ಲೋಬೋ ಆನ್ ರಿಯಾ ನೇವಿಲ್ ಕಾರ್ಯಕ್ರಮವನ್ನು ನಿರೂಪಿಸಿದರು.

 
 
 
 
 
 
 
 
 
 
 

Leave a Reply