ಸ್ಪರ್ಧೆಗಳಿಂದ ಪ್ರತಿಭೆಗಳ ಅನಾವರಣ

ಶಿರ್ವ: ಇಂದು ನಾವು ಸ್ಪರ್ಧಾತ್ಮಕ ಮತ್ತು ತಾಂತ್ರಿಕ ಯುಗದಲ್ಲಿ ಇದ್ದೇವೆ. ಪ್ರತಿಯೊಂದು ಉದ್ಯೋಗ ಕ್ಷೇತ್ರದಲ್ಲಿ ಅನೇಕ ಅವಕಾಶಗಳಿದ್ದು ಅದನ್ನು ಪಡೆಯುವುದರಲ್ಲಿ ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ವಿದ್ಯಾರ್ಥಿ ದೆಸೆಯಲ್ಲೇ ಪಡೆದುಕೊಳ್ಳಲು ವಿವಿಧ ಸ್ಪರ್ಧೆಗಳ ಅವಶ್ಯಕತೆ ಇಂದು ಅನಿವಾರ್ಯವಾಗಿದೆ . ಪ್ರತಿಯೊಂದು ಸ್ಪರ್ಧೆಯು ಯುವ ಪೀಳಿಗೆಗಳಿಗೆ ಜೀವನದ ಕೌಶಲ್ಯ ಜೊತೆಗೆ ವ್ಯಕ್ತಿತ್ವ ವಿಕಸನವನ್ನು ರೂಪಿಸುವಲ್ಲಿ ಸಹಕಾರಿಯಾಗಲಿದೆ, ತನ್ಮೂಲಕ ಪ್ರತಿಭೆಗಳ ಅನಾವರಣ ಆಗಲಿದೆ ಎಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗವು ತನ್ನ ಘಟಕವಾದ ಐಟಿ ಕ್ಲಬ್ ನ ಮೂಲಕ ಬಿಸಿಎ ವಿದ್ಯಾರ್ಥಿಗಳಿಗೆ ಆಯೋಜಿಸಿದ ಟೆಕ್ ಮಂತನ 22 ಐಟಿ ಕಾಂಪಿಟೇಶನ್ಸ್ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ! ಹೆರಾಲ್ಡ್ ಐವನ್ ಮೋನಿಸ್ ಅಧ್ಯಕ್ಷ ನೆಲೆಯಲ್ಲಿ ಮಾತನಾಡಿ ವಿಜೇತರಿಗೆ ಪ್ರಮಾಣ ಪತ್ರ ಜೊತೆಗೆ ಬಹುಮಾನಗಳನ್ನು ವಿತರಿಸಿದರು.

ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಐಟಿ ಕ್ಲಬ್ ನಿರ್ದೇಶಕ ಲೆಫ್ಟಿನೆಂಟ್ ಶ್ರೀ ಕೆ ಪ್ರವೀಣ್ ಕುಮಾರ್ ಟೆಕ್ ಮಂತನ್ 22 ಐಟಿ ಕಾಂಪಿಟೇಶನ್ಸ್ ಬಗ್ಗೆ ಮಾರ್ಗದರ್ಶನ ನೀಡಿ ಪ್ರಾಸ್ತವಿಕವಾಗಿ ಮಾತನಾಡಿದರು. ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಲ್ಲಿ ಅಡಗಿರುವ ವಿವಿಧ ಕೌಶಲ್ಯಗಳನ್ನು ವೃದ್ಧಿಸುವ ರಸಪ್ರಶ್ನೆ,ಚರ್ಚೆ ಕೋಡಿಂಗ್, ಗೇಮಿಂಗ್,ರಂಗೋಲಿ,ಅಣುಕು ಸಂದರ್ಶನ, ಪೋಸ್ಟರ್ ತಯಾರಿಕೆ, ಪವರ್ಪಾಯಿಂಟ್ ಪ್ರಸ್ತುತಿ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್, ಕೆಂಜಾರ್ನಲ್ಲಿ ನಡೆದ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಗೇಮಿಂಗ್ ಕಾಂಪಿಟೇಶನ್ ನಲ್ಲಿ 1500 ನಗದು ಬಹುಮಾನ ಪಡೆದು ವಿಜೇತರಾದ ಶ್ರೀ ದೇವಿ ಪ್ರಸಾದ್ ಶೆಟ್ಟಿ, ಹಾರ್ದಿಕ್ ಸಾಲಿಯಾನ್, ವರ್ಷಿತ್ ಶೆಟ್ಟಿ ಹಾಗೂ ಡೆನ್ಸನ್ ಬ್ರೈನ್ ನಜರೆತ್ ಇವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಾದ ಮಾನ್ವಿತ ಎಸ್ ಸುವರ್ಣ, ಪದ್ಮಶ್ರೀ ಭಟ್, ರಾಯ್ಸನ್ ಜೋಸೆಫ್ ಬರ್ಬೋಜಾ , ನಿವೇದಿತಾ ನಿಖಿಲ್ ಪೂಜಾರಿ, ಪ್ರತ್ವಿನ್ ಬಂಗೇರ ಈ ಸ್ಪರ್ಧೆಯ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.


ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಮತಿ ದಿವ್ಯಶ್ರೀ ಬಿ, ಶ್ರೀ ಪ್ರಕಾಶ್, ಕು. ಪ್ರಣಿತ, ಬಿಸಿಎ ವಿಭಾಗದ ಎಲ್ಲಾ ಅಧ್ಯಾಪಕ ಅಧ್ಯಾಪಕೇತರಬಂಧುಗಳು , ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕು.ಪ್ರೀತಿಕಾ ಬಹುಮಾನ ಪಟ್ಟಿಯನ್ನು ವಾಚಿಸಿದರು.ವಿದ್ಯಾರ್ಥಿಗಳಾದ ಸನತ್ ಕುಮಾರ್ ಶೆಟ್ಟಿ, ರಕ್ಷಿತ್ ಪೂಜಾರಿ,ಅನುಪ್ ನಾಯಕ,ಸಹಕರಿಸಿದರು.ಕು. ಪ್ರಿಯಾಂಕ ಪ್ರಾರ್ಥಿಸಿದರು. ಕು.ಸೃಷ್ಟಿ ಸ್ವಾಗತಿಸಿ, ವಿಧಾತ್ ಶೆಟ್ಟಿ ವಂದಿಸಿದರು. ಕು. ಎಲ್ರುಶಾ ಮೆಲಿನಾ ಡಿಸಾ ಕಾರ್ಯಕ್ರಮ ಸಂಯೋಜಿಸಿದರು.

 
 
 
 
 
 
 
 
 
 
 

Leave a Reply