ಸಂತ ಮೇರಿ ಮಹಾವಿದ್ಯಾಲಯ , ಶಿರ್ವ ಪ್ಲೇಸ್‌ಮೆಂಟ್ ಸ್ಕಿಲ್ ಮತ್ತು ಟ್ರೈನಿಂಗ್ ಕಾರ್ಯಗಾರ

ಶಿರ್ವ: ವಿದ್ಯಾರ್ಥಿಗಳ ವೃತ್ತಿಜೀವನದ ಗುರಿಗಳನ್ನು ರೂಪಿಸುವಲ್ಲಿ ಉದ್ಯೋಗ ತರಬೇತಿ ಪ್ರಮುಖ ಪಾತ್ರ ವಹಿಸುತ್ತದೆ. ನೇಮಕಾತಿಗಾಗಿ ತಮ್ಮ ಕ್ಯಾಂಪಸ್‌ಗೆ ಭೇಟಿ ನೀಡುವ ಉನ್ನತ ಸಂಸ್ಥೆಯಲ್ಲಿ ಸ್ಥಾನ ಪಡೆಯುವುದು ಪ್ರತಿಯೊಬ್ಬ ಕಂಪ್ಯೂಟರ್ ಪದವಿ ವಿದ್ಯಾರ್ಥಿಯ ಕನಸಾಗಿದೆ. ಈ ಪ್ರಮುಖ ಅಂಶವನ್ನು ಪರಿಗಣನೆಗೆ ಇಟ್ಟುಕೊಂಡು, ಪದವಿ ವಿದ್ಯಾರ್ಥಿಗಳಿಗೆ ತಮ್ಮ ಉದ್ಯೋಗ ಕೌಶಲ್ಯಗಳನ್ನು ಹೆಚ್ಚಿಸಲು ಮತ್ತು ವಿವಿಧ ಉದ್ಯಮಗಳಲ್ಲಿ ಉತ್ತಮ ಉದ್ಯೋಗವನ್ನು ಸಾಧಿಸಲು ತರಬೇತಿ ಮುಖ್ಯವಾಗಿದೆ ಎಂದು ಸಂತ ಮೇರಿ ಮಹಾ ವಿದ್ಯಾಲಯ,ಶಿರ್ವ ಮತ್ತು ಮೈಟ್ ಕಾಲೇಜು, ಮಿಜಾರು ನಡುವೆ ಒಡಂಬಡಿಕೆಯ ಅನುಸರಿಸಿ ಗಣಕ ವಿಜ್ಞಾನ ವಿಭಾಗ ಏರ್ಪಡಿಸಿದ ಪ್ಲೇಸ್‌ಮೆಂಟ್ ಸ್ಕಿಲ್ ಮತ್ತು ಟ್ರೈನಿಂಗ್ ಕಾರ್ಯಗಾರದಲ್ಲಿ ಮುಖ್ಯ ಅತಿಥಿ ಮಿಜಾರ್ ಮೈಟ್ ಕಾಲೇಜು ಸಹಾಯಕ ಪ್ರಾಧ್ಯಾಪಕ ಅಕ್ಷತ್ರಾಜ್ ಜೈನ್ ಹೇಳಿದರು.

ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು, ತಾಂತ್ರಿಕ ಪರಿಣತಿಯೊಂದಿಗೆ ಸಮಗ್ರ ವ್ಯಕ್ತಿತ್ವದ ಬೆಳವಣಿಗೆಯೂ ಅಗತ್ಯ. ಈ ಅವಶ್ಯಕತೆಗಳನ್ನು ಪೂರೈಸಲು, ಉದ್ಯಮದ ಗುಣಮಟ್ಟಕ್ಕೆ ಸಮಾನವಾಗಿ ಕಂಪ್ಯೂಟರ್ ಪದವೀಧರರ ಸಾಮರ್ಥ್ಯವನ್ನು ಹೆಚ್ಚಿಸಲು ವೃತ್ತಿ ಮತ್ತು ಉದ್ಯೋಗ ಸಂಬಂಧಿತ ಚಟುವಟಿಕೆಗಳ ಬಗ್ಗೆ ಸಂಪೂರ್ಣ ತರಬೇತಿಯನ್ನು ಪಡೆದು ಅವರ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿದರು

ವಿದ್ಯಾರ್ಥಿಗಳಿಗೆ ಸರಿಯಾದ ಮಾಹಿತಿ ಮತ್ತು ಮಾರ್ಗದರ್ಶನದೊಂದಿಗೆ ವಿವಿಧ ಕೌಶಲಗಳೊಂದಿಗೆ ತರಬೇತಿ ನೀಡುವುದು ಸಂಸ್ಥೆ ಹಾಗೂ ಪೋಷಕರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಐಟಿ ಕ್ಲಬ್ ಡೈರೆಕ್ಟರ್ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ರವರು ಪ್ರಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ತಿಳಿಸಿದರು.

ಮೈಟ್ ಕಾಲೇಜಿನ ಹಿರಿಯ ಸಹಾಯಕ ಪ್ರಾಧ್ಯಾಪಕರಾದ ಶ್ರೀ ವರುಣ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಬಯೋಡೇಟಾ ಬರವಣಿಗೆ, ಆಪ್ಟಿಟ್ಯೂಡ್ ಟೆಸ್ಟ್, ಗುಂಪು ಚರ್ಚೆ, ಸಂದರ್ಶನವನ್ನು ಹೇಗೆ ಎದುರಿಸುವುದು ಸೇರಿದಂತೆ ಉದ್ಯೋಗ ಕೌಶಲ್ಯಗಳು. ಒಂದು ಅವಲೋಕನ
ಮುಂದುವರಿಕೆಯಲ್ಲಿ ಪ್ರಸ್ತುತಿ ಕೌಶಲ್ಯಗಳು, ನಾಯಕತ್ವ ಕೌಶಲ್ಯಗಳು ಮತ್ತು ಸ್ವಯಂ ಪ್ರೇರಣೆ ಸಂಬಂಧಿತ ಚಟುವಟಿಕೆಗಳಿಗೆ ಸಂಬಂಧಿಸಿದ ಕೆಲವು ಚಟುವಟಿಕೆಗಳು ಬಗ್ಗೆ ತರಬೇತಿ ನೀಡುತ್ತಾರೆ.

ಈ ಕಾರ್ಯಕ್ರಮದಲ್ಲಿ ಉಪನ್ಯಾಸಕ ಪ್ರಕಾಶ್, ದಿವ್ಯಶ್ರೀ, ಸುಷ್ಮಾ,ಬಿಸಿಎ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಕಾಲೇಜು ವಿದ್ಯಾರ್ಥಿಗಳಾದ ಅನುಪ್ ನಾಯಕ್ ಮತ್ತು ಅಲಿಸ್ಟರ್ ಕಾರ್ಯಾಗಾರದಲ್ಲಿ ಸಹಕರಿಸಿದರು. ಶ್ರಾವ್ಯ ಮತ್ತು ತಂಡದವರು ಪ್ರಾರ್ಥನೆ ಸಲ್ಲಿಸಿದರು. ದೀಪ್ತಿ ವಂದಿಸಿದರು, ಛಾಯಾ ಕರ್ಕೇರ ಸ್ವಾಗತಿಸಿ, ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.

Leave a Reply