ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅವಕಾಶ ಬಿಜೆಪಿಯಿಂದ ಮಾತ್ರ ಸಾಧ್ಯ : ಶಾಂತಾರಾಮ ಸಿದ್ದಿ

ಬಿಜೆಪಿ ಸಮಾಜದ ಕಟ್ಟಕಡೆಯ ಸಮುದಾಯದ ಸಾಮಾನ್ಯ ವ್ಯಕ್ತಿಯನ್ನು ವಿಧಾನ ಪರಿಷತ್ ಸದಸ್ಯನಾಗಿ ಆಯ್ಕೆ ಮಾಡಿರುವುದು ಸಮಾಜಕ್ಕೆ ಉತ್ತಮ ಸಂದೇಶವನ್ನು ರವಾನಿಸಿದೆ. ಆ ಮೂಲಕ ಪಕ್ಷವು ಸರ್ವಸ್ಪರ್ಶಿ ಸರ್ವವ್ಯಾಪಿ ಎಂಬುದನ್ನು ಸಾಬೀತುಪಡಿಸಿದೆ. ಇದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ನೂತನ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಘಟಕದ ಗೌರವಾರ್ಪಣೆಯನ್ನು ಸ್ವೀಕರಿಸಿ ಮಾತನಾಡಿದರು.
ಬಿಜೆಪಿ ಕೇವಲ ಒಂದು ರಾಜಕೀಯ ಪಕ್ಷ ಮಾತ್ರವಲ್ಲ. ಸೇವಾ ಸಂಘಟನೆಯೂ ಹೌದು. ಇಂದು ಸಮಾಜದ ದುರ್ಬಲ ಕೊಂಡಿಯಂತಿರುವ ವನವಾಸಿ ಬುಡಕಟ್ಟು ಜನಾಂಗಕ್ಕೆ ಹೆಚ್ಚಿನ ಸವಲತ್ತುಗಳ ಅವಶ್ಯಕತೆ ಇದೆ. ಈ ನಿಟ್ಟನಲ್ಲಿ ಸಂಘ ಪರಿವಾರದ ಸೇವೆಯ ಜೊತೆಗೆ ವಸತಿ, ಕುಡಿಯುವ ನೀರು ಮುಂತಾದ ಮೂಲಭೂತ ಸೌಕರ್ಯಗಳಿಗೆ ಸರಕಾರ ಪರಿಣಾಮಕಾರಿಯಾಗಿ ಸ್ಪಂದಿಸುತ್ತಿರುವುದು ಸಂತಸ ತಂದಿದೆ ಎಂದರು.

ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಶಾಂತಾರಾಮ ಸಿದ್ದಿಯವರನ್ನು ಶಾಲು ಹೊದೆಸಿ ಸನ್ಮಾನಿಸಿದರು.
 
ಈ ಸಂದರ್ಭದಲ್ಲಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ, ಜಿಲ್ಲಾ ಎಸ್. ಟಿ. ಮೋರ್ಚಾ ಅಧ್ಯಕ್ಷ ನಿತ್ಯಾನಂದ ನಾಯ್ಕ್ ಚಾಂತಾರು, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಹಾಗೂ ಮಂಡಲ, ಮೋರ್ಚಾ, ಪ್ರಕೋಷ್ಠಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ ವಂದಿಸಿದರು.

 
 
 
 
 
 
 
 
 
 
 

Leave a Reply