ಸಿಎಂ ಬೊಮ್ಮಾಯಿ ಕಾಂಗ್ರೆಸ್‌ ಬಾಗಿಲು ತಟ್ಟಿದ್ದರು – ವಿನಯ್‌ ಕುಮಾರ್‌ ಸೊರಕೆಯ ಹೊಸ ರಾಗ 

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಬಯಸಿದ್ದರು. ಹಿಂದೊಮ್ಮೆ ನಮ್ಮ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರನ್ನು ಭೇಟಿಯಾಗಿ ಚರ್ಚೆ ಮಾಡಿದ್ದರು ಎಂದು ಕಾಂಗ್ರೆಸ್‍ನ ಹಿರಿಯ ನಾಯಕ ವಿನಯ್ ಕುಮಾರ್ ಸೊರಕೆ ಹೊಸ ಬಾಂಬ್‌ ಹಾಕಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡುತ್ತಾ, ಬಸವರಾಜ ಬೊಮ್ಮಾಯಿ ಆರ್‌ಎಸ್‌ಎಸ್‌ -ಸಂಘಪರಿವಾರದ ಜನ ಅಲ್ಲ. ಬಿಜೆಪಿಯವರಿಗೆ ಬೊಮ್ಮಾಯಿ ಸಿಎಂ ಕುರ್ಚಿಯಲ್ಲಿ ಕುಳಿತು ಕೊಂಡಿರುವುದು ಸಹಿಸಲಾಗುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಹಿಂದೆ ಬೊಮ್ಮಾಯಿ ಕಾಂಗ್ರೆಸ್ ಸೇರಲು ಮುಂದಾಗಿದ್ದರು. ಆಸ್ಕರ್ ಫರ್ನಾಂಡಿಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಬೊಮ್ಮಾಯಿಯವರ ತಂದೆ ಜೆಡಿಎಸ್‍ನಲ್ಲಿ ಇದ್ದವರು. ಎಂ.ಪಿ ಪ್ರಕಾಶ್ ಕಾಂಗ್ರೆಸ್ ಸೇರುವಾಗ ಬೊಮ್ಮಾಯಿ ಕೂಡ ನಮ್ಮನ್ನು ಸಂಪರ್ಕ ಮಾಡಿದ್ದರು. ಬೊಮ್ಮಾಯಿ ಜಾತ್ಯಾತೀತ ನಿಲುವು ಇರುವವರು.

ಜಾತ್ಯಾತೀತ ನಿಲುವನ್ನು ಬಿಜೆಪಿಯವರು ಸಹಿಸುತ್ತಾರಾ? ಬಿಜೆಪಿಯವರಿಗೆ ಯು.ಪಿಯ ಯೋಗಿ ಯಂತ ಜನ ಬೇಕು. ಬೊಮ್ಮಾಯಿ ಸಿಎಂ ಆಗಿ ಎಷ್ಟು ಸಮಯ ಇರುತ್ತಾರೋ ಗೊತ್ತಿಲ್ಲ ಎಂದು ಹೇಳಿದರು.

 
 
 
 
 
 
 
 
 
 
 

Leave a Reply