ತೆಂಕನಿಡಿಯೂರು ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

ಉಡುಪಿ: ಅಭಿವೃದ್ಧಿ ಎಂದರೆ ಮೇಲ್ನೋಟದ ಭೌತಿಕ ಅಭಿವೃದ್ಧಿಯಲ್ಲ, ಬದಲಾಗಿ ಜನರ ಸಾಮಾಜಿಕ ಸ್ಥಿತಿಗತಿಗಳಲ್ಲಿ ಆರೋಗ್ಯ ಪೂರ್ಣ ಅಭಿವೃದ್ಧಿಯಾಗಬೇಕು ಮತ್ತು ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕು ಕೂಡ ಹಸನಾದಾಗ ಅಭಿವೃದ್ಧಿಗೆ ಅರ್ಥ ಬರುತ್ತದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಹೆಚ್.ಡಿ. ಪ್ರಶಾಂತ್ ಹೇಳಿದರು. 

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನ ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗದ ವತಿಯಿಂದ ಜರಗಿದ“ಅಭಿವೃದ್ಧಿ ಮತ್ತು ಅಸಮಾನತೆ” ಎಂಬ ವಿಷಯದ ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿಮಾತನಾಡಿದರು. ಮಹಾತ್ಮಾ ಗಾಂಧಿಜಿಯ ಗ್ರಾಮ ಸ್ವರಾಜ್ಯ ಮತ್ತು ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಸಮಾನತೆಯ ಕಲ್ಪನೆಯ ಕುರಿತು ವಿವರಿಸಿದರು. 

ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್. ಹೆಗ್ಡೆ ಇವರು ವಹಿಸಿ ಮಾತನಾಡಿ “ಅಭಿವೃದ್ಧಿಯಲ್ಲಿ ಸುಸ್ಥಿತಿರತೆ ಇರಬೇಕು, ಸರಕಾರದ ಯೋಜನೆಗಳನ್ನು ರೂಪಿಸುವ ಪ್ರಕ್ರಿಯೆಯಲ್ಲಿ ಸ್ಥಳೀಯ ಜನರ ಬೇಡಿಕೆಗಳನ್ನು ಪರಿಗಣಿಸಿಕೊಂಡಲ್ಲಿ ಯೋಜನೆಗಳಿಗೆ ಹೆಚ್ಚು ಮಹತ್ವ ಬರುತ್ತದೆ” ಎಂದರು.

ಐ.ಕ್ಯೂ.ಎ.ಸಿ.ಸಂಯೋಜಕ ಡಾ. ಸುರೇಶ್ ರೈ ಕೆ. ಹಾಗೂ ಸಮಾಜಕಾರ್ಯ ವಿಭಾಗ ಮುಖ್ಯಸ್ಥ ಡಾ. ದುಗ್ಗಪ್ಪ ಕಜೆಕಾರ್ ಉಪಸ್ಥಿತರಿದ್ದರು. ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕಿ ಡಾ. ಸುನೀತಾ ವಿ. ಸ್ವಾಗತಿಸಿದರು. ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಶ್ರೀ ರಾಘವ ನಾಯ್ಕ ವಂದಿಸಿದರು. ಶಗುಪ್ತ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply