ರೋಗಿಯ ಹೊಟ್ಟೆಯಲ್ಲಿತ್ತು ಬರೋಬ್ಬರಿ 62 ಸ್ಪೂನ್!

ಭೋಪಾಡ ರಸ್ತೆಯ ಇವಾನ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಸಿದ ಶಸ್ತ್ರ ಚಿಕಿತ್ಸೆಯಲ್ಲಿ ರೋಗಿಯ ಹೊಟ್ಟೆಯಿಂದ ಬರೋಬ್ಬರಿ 63 ಸ್ಟೀಲ್ ಸ್ಪೂನ್‌ಗಳನ್ನು ಹೊರ ತೆಗೆಯಲಾಗಿದೆ. ಉತ್ತರ ಪ್ರದೇಶ ಭೋಪಾಡ ಜಿಲ್ಲೆಯ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ತಪಾಸಣೆ ಮಾಡಿದ ವೈದ್ಯರೇ ಕೆಲಕಾಲ ಶಾಕ್​ ಆಗಿದ್ದಾರೆ. ಆ ರೋಗಿಯ ಹೊಟ್ಟೆಯಲ್ಲಿ ಬರೋಬ್ಬರಿ 62 ಚಮಚಗಳು ಪತ್ತೆಯಾಗಿದ್ದು, ಕಳೆದ ಒಂದು ವರ್ಷದಿಂದ ಆತ ಚಮಚಗಳನ್ನು ತಿನ್ನುತ್ತಿದ್ದ ಎಂಬುದು ಬಯಲಾಗಿದೆ. ಆದ್ರೆ ರೋಗಿಯ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂಬುದು ವೈದ್ಯರ ಹೇಳಿಕೆಯಾಗಿದೆ. ಮನ್ಸೂರ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಚ್ಚರಿಯ ಪ್ರಕರಣ ಬೆಳಕಿಗೆ ಬಂದಿದೆ.

ರೋಗಿಯ ಹೊಟ್ಟೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರೇ ಶಾಕ್ಇಂತಹ ವಿಚಿತ್ರ ಪ್ರಕರಣ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ನಡೆದಿದೆ. 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ರೋಗಿಯ ಹೊಟ್ಟೆಯಿಂದ 62 ಚಮಚಗಳನ್ನು ಹೊರತೆಗೆದಿದ್ದರಾದರೂ ಆತನ ಆರೋಗ್ಯ ಸ್ಥಿತಿ ಸುಧಾರಿಸಿಲ್ಲ. ಗಂಭೀರ ಸ್ಥಿತಿಯಲ್ಲಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಮಾಹಿತಿ ಪ್ರಕಾರ, ಮನ್ಸೂರ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಪಾಡ ಗ್ರಾಮದ ನಿವಾಸಿ ವಿಜಯ್ ಮಾದಕ ವ್ಯಸನಿಯಾಗಿದ್ದಾನೆ. ಹೀಗಾಗಿ ವಿಜಯ್ ಕುಟುಂಬಸ್ಥರು ಅವರನ್ನು ಮಾದಕ ವ್ಯಸನ ನಿವಾರಣಾ ಕೇಂದ್ರಕ್ಕೆ ದಾಖಲಿಸಿದ್ದರು. ಶಾಮ್ಲಿಯಲ್ಲಿರುವ ಮಾದಕ ವ್ಯಸನ ನಿಗ್ರಹ ಕೇಂದ್ರದಲ್ಲಿ ವಿಜಯ್ ಸುಮಾರು ಒಂದು ತಿಂಗಳ ಕಾಲ ಇದ್ದರು ಎಂದು ಹೇಳಲಾಗುತ್ತಿದೆ.

 
 
 
 
 
 
 
 
 
 
 

Leave a Reply