ಮಹಾತ್ಮಾ ಗಾಂಧಿ ಪ್ರೌಢಶಾಲೆ ಸಾಹೇಬರಕಟ್ಟೆ ಇದರ 2022-23ನೆಯ ಸಾಲಿನ ವಾರ್ಷಿಕ ಕ್ರೀಡಾಕೂಟ ಡಿಸೆಂಬರ್ 1ರಂದು ಜರಗಿತು. ಯಡ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸವಿತಾ ಪಿ ದೇವಾಡಿಗ ವಿದ್ಯುಕ್ತವಾಗಿ ಉದ್ಘಾಟಿಸಿ “ಪಠ್ಯ ದೊಂದಿಗೆ ಕ್ರೀಡೆಗಳೂ ಜೀವನದಲ್ಲಿ ಮುಖ್ಯ. ಮಾನಸಿಕ ಸ್ವಾಸ್ಥ್ಯ ಕಂಡುಕೊಳ್ಳಲು ಕ್ರೀಡೆಗಳು ಸಹಕಾರಿ” ಎಂದರು. ಅಭ್ಯಾಗತರಾಗಿ ಸಂಸ್ಥೆಯ ಹಳೇವಿದ್ಯಾರ್ಥಿ ಹಾಗೂ ಇಂದಿನ ಯಡ್ತಾಡಿ ಗ್ರಾಮಪಂಚಾಯತ್ ಸದಸ್ಯ ಅಮೃತ್ ಪೂಜಾರಿ ಕ್ರೀಡಾ ಜ್ಯೋತಿ ಬೆಳಗಿಸಿ ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಹಾಗೂ ಉದ್ಯಮಿ ಶ್ರೀ ಶರತ್ ಕುಮಾರ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಶಿಕ್ಷಕ ಸತೀಶ್ ನಾಯ್ಕ್ ಸ್ವಾಗತಿಸಿ ದೈಹಿಕ ಶಿಕ್ಷಣ ಶಿಕ್ಷಕ ವಿಜಯ ಕುಮಾರ್ ಶೆಟ್ಟಿ ವಂದಿಸಿದರು.ಶಿಕ್ಷಕ ಶಿರಿಯಾರ ಗಣೇಶ ನಾಯಕ್ ನಿರೂಪಿಸಿದರು.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.