ಜಿಲ್ಲಾ ಮಟ್ಟದ ಅಂತರ್ ಯುವ ಮಂಡಲಗಳ ಕ್ರೀಡಾಕೂಟ

ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ
ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಅಂತರ್ ಯುವ ಮಂಡಲಗಳ ಕ್ರೀಡಾಕೂಟ ದಿನಾಂಕ 05/02/2023 ನೇ ರವಿವಾರ ಬೆಳಿಗ್ಗೆ 08.30 ಕ್ಕೆ ಸರಿಯಾಗಿ ಪ್ರಕೃತಿ ನ್ಯಾಷನಲ್ ಸ್ಕೂಲ್ ಸಾಣೂರು ಇಲ್ಲಿ ನಡೆಯಲಿದೆ.

ಜಿಲ್ಲೆಯ ಎಲ್ಲಾ ಯುವಕ ಸಂಘಗಳ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದವೆ.
ಏಕಲವ್ಯ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ಕ್ರೀಡಾಪಟು ಅಕ್ಷತಾ ಪೂಜಾರಿ ಬೋಳ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ವಿವಿಧ ಗಣ್ಯರೊಂದಿಗೆ ಕಾರ್ಕಳ ಶಾಸಕರು ಕರ್ನಾಟಕ ಸರಕಾರದ ಇಂಧನ ಹಾಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ವಿ ಸುನೀಲ್ ಕುಮಾರ್ ಉದ್ಘಾಟಿಸಲಿದ್ದಾರೆ.

 
 
 
 
 
 
 
 
 
 
 

Leave a Reply