ಸೋಮವಾರ ಪ್ರಕಟವಾಗಲಿದೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ : ಎಲ್ಲರೂ ಪಾಸ್ ಎನ್ನುವುದೇ ವಿಶೇಷ

ಬೆಂಗಳೂರು: ಬಹುನಿರೀಕ್ಷಿತ 2021ರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಸೋಮವಾರ(ಆ.9) ಮಧ್ಯಾಹ್ನ 3.30ಕ್ಕೆ ಪ್ರಕಟವಾಗಲಿದೆ.

ಆ.9ರಂದು ಮಧ್ಯಾಹ್ನ 3.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ಆನಂತರ ವಿದ್ಯಾರ್ಥಿಗಳಿಗೆ ಫಲಿತಾಂಶ ದೊರೆಯಲಿದೆ.

ಫಲಿತಾಂಶವನ್ನು ಆಗಸ್ಟ್ 10ರೊಳಗೆ ಪ್ರಕಟಿಸುವುದಾಗಿ ಈ ಹಿಂದಿನ ಸಚಿವರು ತಿಳಿಸಿದ್ದರು. ಅದರಂತೆಯೇ ಆ.9ರಂದು ಫಲಿತಾಂಶ ಪ್ರಕಟಿಸಲಿದೆ.ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕರೊನಾ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಕೇವಲ ಎರಡು ದಿನಗಳಲ್ಲೇ ಮುಗಿಸಲಾಗಿತ್ತು. ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ಪಾಸ್ ಮಾಡಲಾಗುವುದು ಎಂದು ಘೋಷಣೆ ಮಾಡಲಾಗಿತ್ತು. 

ಪರೀಕ್ಷೆಯಲ್ಲಿ ಉತ್ತಮ ಪ್ರಗತಿ ಸಾಧಿಸಿದ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆಯಲಿದ್ದಾರೆ. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ https://sslc.karnataka.gov.in/ ವೆಬ್‌ಸೈಟ್‌ಗೆ ಭೇಟಿ ನೀಡಿ ಸೋಮವಾರ ಫಲಿತಾಂಶ ಪಡೆಯಬಹುದು.

 
 
 
 
 
 
 
 
 
 
 

Leave a Reply