ಸಂತ ಮೇರಿ ಮಹಾವಿದ್ಯಾಲಯ ಶಿರ್ವದಲ್ಲಿ ‘ರಾಷ್ಟ್ರೀಯ 75 ನೇ ಭಾರತ ಸೇನಾ ದಿನಾಚರಣೆ’

ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ 75ನೇ ಭಾರತ ಸೇನಾ ದಿನಾಚರಣೆಯನ್ನು ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲ ಡಾ!ಹೆರಾಲ್ಡ್ ಐವನ್ ಮೋನಿಸ್ ರವರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದ್ದರು.ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ರವರು ಆರ್ಮಿಯ ವಿಶಿಷ್ಟತೆಯ ಬಗ್ಗೆ ಮಾತನಾಡಿ ಎಲ್ಲರಿಗೂ ಶುಭ ಹಾರೈಸಿದರು.

ಕಾಡೆಟ ಗೌತಮಿಕ್ ಕರ್ಕೆರ ಕಾರ್ಯಕ್ರಮದ ಮುಖ್ಯ ಉದ್ದೇಶ ಮತ್ತು ಪ್ರಾಮುಖ್ಯತೆಯನ್ನು ತಿಳಿಸಿ ಪ್ರಾಸ್ತವಿಕವಾಗಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ ಉಡುಪಿ ಘಟಕದ ಹವಾಲ್ದಾರ್ ವಿನೋದ್ ರಾಯ್, ಅಮೀರ್ ತಮಾಂಗ,ಸೀನಿಯರ್ ಅಂಡರ್ ಆಫೀಸರ್ ಮೋಹಿತ್ ಎನ್ ಸಾಲಿಯಾನ್ ಜೂನಿಯರ್ ಅಂಡರ್ ಆಫೀಸರ್ ಧೀರಜ್ ಆಚಾರ್ಯ, ಲೋಬೋ ಆನ್ ರಿಯಾ ನೇವಿಲ್,ಎಲ್ಲಾ ಕ್ಯಾಡೆಟ್ಗಳು ಉಪಸ್ಥಿತರಿದ್ದರು.ಲ್ಯಾನ್ಸ್ ಕಾರ್ಪೋರಲ್ ಶೆಟ್ಟಿಗಾರ ಹೇಮಶ್ರೀ ಸುದರ್ಶನ್, ಅನೀಶ್ ಭಟ್ ಕ್ಯಾಡೆಟ್ ಅನುಪ್ ನಾಯಕ್ ಮತ್ತು ಅಲಿಸ್ಟಾರ್ ಸುಜಯ್ ಡಿಸೋಜ ಸಹಕರಿಸಿದ್ದರು.
ಕಾಡೆಟ ಪೂಜಾ ಸ್ವಾಗತಿಸಿ, ಪುಣ್ಯ ಹೆಚ್ ಆರ್ ವಂದಿಸಿದರು. ರಾಹುಲ್ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply