ಪುತ್ತಿಗೆ ಶ್ರೀಗಳು ಕೊರೊನದಿಂದ ಮುಕ್ತಿ

 

ಉಡುಪಿ: ಅಷ್ಟಮಠಗಳಲ್ಲಿ ಒಂದಾದ ಪುತ್ತಿಗೆ ಶ್ರೀಗಳು ಸಾಂಕ್ರಮಿಕ ಸೋಂಕು ಕೋವಿಡ್ ನಿಂದ ಮುಕ್ತರಾಗಿದ್ದಾರೆ.

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ದಾಖಲಾಗಿದ್ದ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಪುತ್ತಿಗೆ ಶ್ರೀಗಳು ಕಳೆದ 12 ದಿನಗಳ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದರು.

ಜು. 20ರಂದು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಶೀತಜ್ವರ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಶ್ರೀಸುಗುಣೇಂದ್ರತೀರ್ಥ ಸ್ವಾಮೀಜಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು‌‌. ಆ ವೇಳೆ ವರದಿ ಪಾಸಿಟಿವ್ ಬಂದಿತ್ತು‌. ಇದೀಗ ಶನಿವಾರ ಸಂಪೂರ್ಣ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಯಾದ ಪುತ್ತಿಗೆ ಶ್ರೀಗಳು ಹಿರಿಯಡ್ಕ ಸಮೀಪದ ಪುತ್ತಿಗೆ ಮೂಲಮಠಕ್ಕೆ ತೆರಳಿದ್ದಾರೆ. ಮುಂದಿನ 14 ದಿನಗಳ ಕಾಲ ಮೂಲ ಮಠದಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ‌. ಸ್ವಾಮೀಜಿಯವರ ಆರೋಗ್ಯ ಸ್ಥಿರವಾಗಿದೆ, ಅವರಿಗೆ ವಿಶ್ರಾಂತಿ ಆವಶ್ಯಕತೆ ಇದೆ. ಆದ್ದರಿಂದ ಭಕ್ತರು ಸದ್ಯ ಮಠಕ್ಕೆ ಆಗಮಿಸುವುದು ಬೇಡ. ಎಂದು ಪುತ್ತಿಗೆ ಮಠದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply