ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಸರಕಾರದ ಗುರಿ

ಬೆಂಗಳೂರು: ರಾಜ್ಯ ಸರಕಾರದ ಜನಸ್ನೇಹಿ ಆಡಳಿತದ ಒಂದು ವರ್ಷ ಸವಾಲುಗಳ ವರ್ಷವಾಗಿದೆ. ಕೋವಿಡ್ ಸಂಕಷ್ಟದ ಸಮಯದಲ್ಲೂ ಸರಕಾರ ಎಲ್ಲಾ ಸವಾಲುಗಳನ್ನು ಎದುರಿಸಿ ಅಭಿವೃದ್ಧಿಯ ಹಾದಿಯಲ್ಲಿ ಸಾಗುವಲ್ಲಿ ಯಶಸ್ವಿಯಾಗಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಈ ಸರಕಾರದ ಗುರಿ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು. ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನವತಂತ್ರಜ್ಞಾನದ ವರ್ಚುವಲ್ ವೇದಿಕೆ ಮೂಲಕ ಆಯೋಜಿಸಲಾದ ರಾಜ್ಯ ಸರಕಾರ ಒಂದು ವರ್ಷ ಪೂರೈಸಿದ ನೇರಪ್ರಸಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ನೇರ ಪ್ರಸಾರ ಕಾರ್ಯಕ್ರಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಡೆಯಿತು.
ಕೋವಿಡ್ 19 ತಂದೊಡ್ಡಿರುವ ಸಮಸ್ಯೆ ನಡುವೆಯೂ ಸಮಾಜದಲ್ಲಿ ಸಂಕಷ್ಟಕ್ಕೀಡಾದ ಜನರಲ್ಲಿ ಭರವಸೆ ಮೂಡಿಸಲು ಜವಾಬ್ದಾರಿಯುತ ಕೆಲಸ ಕಾರ್ಯಗಳು ರಾಜ್ಯ ಸರಕಾರದಿಂದ ನಡೆಯಲಿದೆ. ಕರ್ನಾಟಕ ರಾಜ್ಯದಲ್ಲಿ ಬಡವರಿಗೆ ಯಾವುದೇ ಸಮಸ್ಯೆ ಎದುರಾಗಬಾರದೆಂಬ ಉದ್ದೇಶ ಸರಕಾರದ್ದಾಗಿದ್ದು, ನಾಡಿನ ಎಲ್ಲ ವರ್ಗದ ಜನಾಂಗ ಜನತೆ ನೆಮ್ಮದಿಯಿಂದ ಬದುಕಬೇಕು. ಎಲ್ಲಾ ವರ್ಗಗಳ  ಅಭಿವೃದ್ದಿ ಕಾರ್ಯಕ್ರಮ ನಡೆಯಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಹೇಳಿದರು.

ಸರಕಾರದ ವಿವಿಧ ಯೋಜನೆಗಳ ಮೂಲಕ ಪ್ರಯೋಜನ ಪಡೆದ ವಿವಿಧ ಜಿಲ್ಲೆಗಳ ಫಲಾನುಭವಿಗಳು ಹಾಗೂ ಸಂತ್ರಸ್ತರೊಂದಿಗೆ ಸಂವಾದ ನಡೆಸಿ, ಅವರ ಕಷ್ಟಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ಸರಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ 19ಗೆ ಚಿಕಿತ್ಸೆ ಪಡೆದು ಗುಣ ಮುಖ ರಾದರಿಂದ ಸರಕಾರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಇದೇ ವೇಳೆ ಸರಕಾರದ ಸಾಧನೆಗಳ ಬಗ್ಗೆ ಕಿರುಸಾಕ್ಷ್ಯ ಚಿತ್ರ ಪ್ರದರ್ಶಿಸಲಾಯಿತು. ಉಪಮುಖ್ಯಮಂತ್ರಿಗಳಾದ ಡಾ. ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿ ಹಾಗೂ ಗೋವಿಂದ ಕಾರಜೋಳ ಅವರು ಯಡಿಯೂರಪ್ಪ ನಾಯಕತ್ವದ ಒಂದು ವರ್ಷದ ಸಾಧನೆ ಬಗ್ಗೆ ಮಾತನಾಡಿದರು 

 

Leave a Reply