ವರ್ಷ ಪೂರ್ಣಗೊಳಿಸಿದ ಸರಕಾರ

 

ವರ್ಷ ಪೂರ್ಣಗೊಳಿಸಿದ ಸರಕಾರ
ನಾಳೆ ವರ್ಚುವಲ್ ಪ್ಲಾಟ್ ಫಾರಮ್ ನಲ್ಲಿ ಕಾರ್ಯಕ್ರಮ

ಉಡುಪಿ: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಪ್ರಥಮ ವರ್ಷಾಚರಣೆ ಕಾರ್ಯಕ್ರಮ ಜು. 27ರಂದು ವರ್ಚುವಲ್ ವೇದಿಕೆ ಮೂಲಕ ನಡೆಯಲಿದೆ.

ಅಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಬಿತ್ತರವಾಗಲಿದೆ. ಕಳೆದ ಒಂದು ವರ್ಷದಲ್ಲಿ ಕೈಗೊಂಡಿರುವ ಜನಪರ ಕಾರ್ಯಕ್ರಮ, ಕೊರೊನಾ ಸಮಯದಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಹಾಗೂ ಮುಂದಿನ ದಿನಗಳಲ್ಲಿ ಆಗಬೇಕಾದ ಕೆಲಸ ಕಾರ್ಯಗಳ ಕುರಿತು ಮುಖ್ಯಮಂತ್ರಿ ಮಾತನಾಡುವರು. ಜೊತೆಗೆ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸುವರು.

ಅಂದು ಬೆಳಿಗ್ಗೆ 11 ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಸರಕಾರದ ಒಂದು ವರ್ಷದ ಸಾಧನೆಗೆ ಸಂಬಂಧಿಸಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ಕಿರುಹೊತ್ತಿಗೆ ಹಾಗೂ ಸರಕಾರದ ಒಂದು ವರ್ಷದ ಪ್ರಗತಿ ಸಾಧನೆ ಬಿಂಬಿಸುವ `ಜನಪದ’ ಮತ್ತು `ಮಾರ್ಚ್ ಆಫ್ ಕರ್ನಾಟಕ’ ಅನಾವರಣ ನಡೆಯಲಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ತಿಳಿಸಿದ್ದಾರೆ.

Leave a Reply